ಬೀದರ್‌ | ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಬೃಹತ್‌ ಪ್ರತಿಭಟನೆ

Date:

Advertisements

ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಸಲ್ಲಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜಿಲ್ಲೆಯಲ್ಲಿ ಶೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ನಿರಂತರ ಅತ್ಯಾಚಾರ, ದಬ್ಬಾಳಿಕ, ಹಲ್ಲೆಗಳು ನಡೆಯುತ್ತಿವೆ. ಡಾ.ಬಿ. ಆರ್.‌ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡುವುದು, ಅಂಬೇಡ್ಕರ್‌ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಬರೆಯುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ. ಇನ್ನೊಂದೆಡೆ ಸಂಸದ ಅನಂತಕುಮಾರ ಹೆಗೆಡೆ ಪುನಃ ಪುನಃ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆದರೂ ಸರ್ಕಾರ ಇಂತಹ ಕಿಡಿಗೇಡಿಗಳ ಮೇಲೆ ಯಾವುದೇ ಕಾನೂನು ಕ್ರಮಕೈಗೊಳ್ಳುತ್ತಿಲ್ಲ” ಎಂದು ವಿಷಾದಿಸಿದರು.

Advertisements

“ಯಾವುದೇ ಜಿಲ್ಲೆಯಲ್ಲಿ ಶೋಷಿತ, ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆದರೆ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಆದರೆ ಅದು ಆದೇಶಕಷ್ಟೇ ಸಿಮೀತವಾಗಿದೆ. ಇಲ್ಲಿಯವರೆಗೂ ಡಿಸಿ, ಎಸ್‌ಪಿಗಳು ಯಾವುದೇ ತಪ್ಪಿಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡ ಉದಾಹರಣೆಗಳಿಲ್ಲ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕುನಿಂದ ಅಧಿಕಾರಿಗಳು ಸಚಿವರ ಕೈಗೊಂಬೆಯಾಗಿದ್ದಾರೆ” ಎಂದು ಆರೋಪಿಸಿದರು.

“ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಬಡ ದಲಿತರು ವ್ಯವಸಾಯ ಮಾಡಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಆದರೆ, ಅನ್ಯಾಯವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಡ ರೈತರ ಕೃಷಿ ಭೂಮಿ ವಶಪಡಿಸಿಕೊಂಡು, ಅವರ ಹೆಸರಿನಲ್ಲಿದ್ದ ಪಹಣಿ, ಮ್ಯುಟೇಶನ್, ʼಸಿʼ ಫಾರಂ ಸೇರಿದಂತೆ ಇತರ ದಾಖಲಾತಿಗಳು ರದ್ದುಪಡಿಸುತ್ತಿದ್ದಾರೆ. ಇನ್ನೊಂದೆಡೆ ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಜಾತಿ ಬಲಾಡ್ಯರು ಅಕ್ರಮ ಸಾಗುವಳಿ ಮಾಡಿಕೊಂಡಿದ್ದಾರೆ. ಆದರೆ ಅರಣ್ಯ ಅಧಿಕಾರಿಗಳು ಜಾತಿ ಬಲಾಡ್ಯರಿಂದ ಅಕ್ರಮ ಭೂಮಿ ವಶಪಡಿಸಿಕೊಳ್ಳಲು ಯಾಕೆ ಧೈರ್ಯ ತೋರುತ್ತಿಲ್ಲ” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಪ್ರತಿಭಟನೆಯಲ್ಲಿ ಶೋಷಿತರ ಸಂರಕ್ಷಣಾ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ ಜಿಲ್ಲಾಧ್ಯಕ್ಷ ವಿಷ್ಣುವರ್ಧನ ವಾಲದೊಡ್ಡಿ, ಉಪಾಧ್ಯಕ್ಷ ರಾಜಕುಮಾರ ಶಿಂಧೆ, ಸುರೇಶ ಜೋಜನಾಕರ್, ಸಂಘಟನಾ ಕಾರ್ಯದರ್ಶಿ ಗೌತಮ ಪ್ರಸಾದ ಸೇರಿದಂತೆ ಸಮಿತಿಯ ಪ್ರಕಾಶ ರಾವಣ, ಅಮೃತ ಮುತ್ತಂಗಿಕರ್, ಸಿದ್ದಾರ್ಥ ಪ್ಯಾಗೆ ಸುಭಾಷ ಲಾಧಾ ರಾಜಕುಮಾರ್‌ ಸಿಂಧೆ ಹಾಗೂ ಮಹಿಳೆಯರು ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X