ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಸಾರ್ವಜನಿಕ ಜಾಗದಲ್ಲಿ ಸ್ಪೋಟಕ ವಸ್ತುಗಳನ್ನು ಇಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
ಈ ಘಟನೆ ಶಾಲಾ ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.