ಸಿಎಎ | ಸುಪ್ರೀಂ ಕೋರ್ಟ್‌ನಲ್ಲಿ ಇಂದು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

Date:

Advertisements

ವಿವಾದಾದ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀ ಕೋರ್ಟ್ ಇಂದು (ಮಂಗಳವಾರ) ಕೈಗೆತ್ತಿಕೊಳ್ಳಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮ 2024ಕ್ಕೆ ಜಾರಿಗೆ ತಡೆಯೊಡ್ಡಬೇಕೆಂದು ಈ ಅರ್ಜಿಗಳು ಕೋರಿವೆ.

ಮುಖ್ಯ ನ್ಯಾಯಾಧೀಶ ಡಿ ವೈ ಚಂದ್ರಚೂಡ ನೇತೃತ್ವದ ನ್ಯಾಯಾಧೀಶ ಜೆಬಿ ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾರನ್ನು ಒಳಗೊಂಡ ಪೀಠವು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಕಳೆದ ವಾರ, ಹಿರಿಯ ವಕೀಲ ಕಪಿಲ್ ಸಿಬಲ್ ಕೇರಳ ಮೂಲದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಸ್ತಾಪವನ್ನು ಕೋರ್ಟ್‌ನಲ್ಲಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಕೇಂದ್ರ ಸರ್ಕಾರವು ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಜಾರಿ ಮಾಡಿರುವುದು ಪ್ರಶ್ನಾರ್ಹವಾಗಿದೆ ಎಂದು ಕಪಿಲ್ ಸಿಬಲ್ ಹೇಳಿದರು. ಸಿಎಎ ಕಾಯ್ದೆ ಧಾರ್ಮಿಕ ತಾರತಮ್ಯವನ್ನು ಮಾಡುವ ಕಾಯ್ದೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Advertisements

ಇದನ್ನು ಓದಿದ್ದೀರಾ?  ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿ: ವಿಚಾರಣೆಗೆ ಸಮ್ಮತಿ

ಸಿಎಎ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ 2014ರ ಡಿಸೆಂಬರ್‌ಗೂ ಮುನ್ನ ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂ, ಕ್ರೈಸ್ತ, ಪಾರ್ಸಿ, ಬೌದ್ಧ, ಜೈನ, ಸಿಖ್‌ಗಳಿಗೆ ಪೌರತ್ವವನ್ನು ನೀಡುವ ಕಾಯ್ದೆಯಾಗಿದೆ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಹೊರಗಿಡಲಾಗಿದೆ.

ಐಯುಎಂಎಲ್ ಹೊರತುಪಡಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಅಸ್ಸಾಂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ, ಸಿಪಿಎಐಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಡಿವೈಎಫ್‌ಐ, ಎಸ್‌ಡಿಪಿಎಐ, ರಿಹಾಯ್ ಮಂಚ್, ಸಿಟಿಜನ್ ಅಗೆನ್ಸ್ಟ್ ಹೇಟ್ ಎನ್‌ಜಿಒ ಮೊದಲಾದವುಗಳು ಅರ್ಜಿಯನ್ನು ಸಲ್ಲಿಸಿದೆ.

2020ರಲ್ಲಿ ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಕದವನ್ನು ಮೊದಲ ಬಾರಿಗೆ ಕೇರಳ ತಟ್ಟಿದೆ. ಇದು ಭಾರತದ ಸಂವಿಧಾನಕ್ಕೆ ವಿರುದ್ದವಾದುದ್ದು, ತಾರತಮ್ಯದಿಂದ ಕೂಡಿದೆ ಎಂದು ಹೇಳಿದೆ. ಅದಾದ ಬಳಿಕ ಈವರೆಗೆ 200ಕ್ಕೂ ಅಧಿಕ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ಮಾರ್ಚ್ 11ರಂದು ಕೇಂದ್ರ ಸರ್ಕಾರವು ಸಿಎಎ ಜಾರಿ ಮಾಡಿದೆ. 2019ರಲ್ಲಿ ಅನುಮೋದನೆಗೊಂಡ ಈ ವಿವಾದಾದ್ಮಕ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನ ಜಾರಿ ಮಾಡಿರುವುದು ಟೀಕೆಗೆ ಕಾರಣವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

Download Eedina App Android / iOS

X