ಮದ್ದೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಗದು ಪತ್ತೆ, ಈವರೆಗೂ ರಾಜ್ಯದಲ್ಲಿ ₹15 ಕೋಟಿ ಜಪ್ತಿ

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ ₹1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಹೋಗುತ್ತಿದ್ದ ಕಾರನ್ನು ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಪೊಲೀಸರು ಕೊಂಗಬೋರನದೊಡ್ಡಿ ಬಳಿ ನಿನ್ನೆ ಸಂಜೆ 7 ಗಂಟೆಯ ವೇಳೆ ತಡೆದು ಪರಿಶೀಲಿಸಿದಾಗ ಅದರಲ್ಲಿ ₹99 ಲಕ್ಷದ ₹20 ಸಾವಿರ ಹಣ ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹಣ ಹಾಗೂ ಕಾರು ವಶಕ್ಕೆ ಪಡೆಯಲಾಗಿದೆ.

ಗಿರೀಶ್ ಎಂಬವರ ಕಾರಿನಲ್ಲಿ ಈ ಹಣ ದೊರೆತಿದೆ. ಚೆಕ್ ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್​ಪೆಕ್ಟರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.

Advertisements

ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದು ಸೂಕ್ತ ಉತ್ತರ, ದಾಖಲೆ ನೀಡದ ಕಾರಣ ಹಣ ಸೀಜ್ ಮಾಡಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಕಾರಲ್ಲಿ ಹಣ ಪತ್ತೆ

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಚೆಕ್​ ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೇ ಭಾರೀ ಮೊತ್ತದ ಹಣ ಸಾಗಿಸುತ್ತಿದ್ದರೆ ವಶಕ್ಕೆ ಪಡೆದು ಕ್ರಮ ಕೈಗೊಳ್ಳುತ್ತಿದ್ದಾರೆ.

₹15 ಕೋಟಿ ಜಪ್ತಿ

ಕಳೆದ ಮಾರ್ಚ್ 16ರಂದು ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಾದ 24 ಗಂಟೆಯಲ್ಲಿ ರಾಜ್ಯದಲ್ಲಿ ₹15.89 ಕೋಟಿ ಮೌಲ್ಯದ ನಗದು, ಮದ್ಯ ಮತ್ತು ಬೆಲೆಬಾಳುವ ಲೋಹಗಳನ್ನು ಚುನಾವಣಾ ಆಯೋಗ ವಶಕ್ಕೆ ಪಡೆದಿದೆ.

ರಾಜ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ಮೊದಲ ದಿನ ನಗದು ರೂಪದಲ್ಲಿ ₹45.76 ಲಕ್ಷ, ಜೊತೆಗೆ ₹15.37 ಕೋಟಿ ಮೌಲ್ಯದ ಮದ್ಯ, ಇತರೆ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X