ಉ. ಪ್ರದೇಶ | ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು!

Date:

Advertisements
  •  ಯೋಗಿ ರಾಜ್ಯದಲ್ಲಿ ದೇಗುಲಗಳಿಗಿಲ್ಲ ಹಣ: ಸಿಎಂ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಸೂಚನೆ
  • ‘ದೇವಾಲಯಗಳು ಹಣಕ್ಕಾಗಿ ಹೈಕೋರ್ಟ್‌ ಮೆಟ್ಟಿಲೇರುವಂತಾಗಿದ್ದು ಬೇಸರದ ಸಂಗತಿ’ ಎಂದ ಜಡ್ಜ್

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರವು, ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡದ ವಿರುದ್ಧ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್‘ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಯಿತು. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಮೊತ್ತ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

Advertisements

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಸ್ವಯಂಚಾಲಿತವಾಗಿ ಪಾವತಿಯಾಗಬೇಕಿದ್ದ ವರ್ಷಾಶನ ಪಾವತಿಯಾಗದೆ ಇರುವುದನ್ನು ನ್ಯಾಯಾಲಯ ಗಮನಿಸಿತು. ಹೀಗಾಗಿ ನ್ಯಾಯಾಲಯವು, ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು” ಎಂದು ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07 ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿತು.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಇದನ್ನು ಓದಿದ್ದೀರಾ? ಸಿಎಎ ಜಾರಿ | ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X