ಅಗತ್ಯ ಸೇವೆಗಳ ಗೈರು ಮತದಾರರಿಗೆ (ಎವಿಇಎಸ್‌) ಅಂಚೆ ಮತದಾನ ಸೌಲಭ್ಯ ವ್ಯವಸ್ಥೆ

Date:

Advertisements

ಲೋಕಸಭಾ ಚುನಾವಣೆಯಲ್ಲಿ 12 ನಾನಾ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ(ಎವಿಇಎಸ್‌) ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ, ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ಇಲಾಖಾವಾರು ಅಗತ್ಯ ಸೇವೆಗಳ ಗೈರು ಮತದಾರರ ಅರ್ಹ ಮತದಾರರ ಪಟ್ಟಿ ನೀಡಿದ ನಂತರ 12ಡಿ ನಮೂನೆಗಳಲ್ಲಿ ಭರ್ತಿ ಮಾಡಿ, ಮಾರ್ಚ್‌ 22ರ ಶುಕ್ರವಾರದೊಳಗಾಗಿ ಸಲ್ಲಿಸಲು ಸೂಚಿಸಲಾಯಿತು.

Advertisements

“ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾದ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ನಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನ ಮಾಡಲು ಅವಕಾಶವಿದೆ. ಅಂಚೆ ಮೂಲಕ ಅಂಚೆ ಮತದಾನ ಪತ್ರವನ್ನು ನೀಡುವ/ತಲುಪಿಸುವ ವ್ಯವಸ್ಥೆ ಈ ಬಾರಿ ಇರುವುದಿಲ್ಲ” ಎಂದು ಹೇಳಿದರು.

ವಿದ್ಯುತ್ ಇಲಾಖೆ, ಬಿ.ಎಸ್.ಎನ್.ಎಲ್ ಇಲಾಖೆ, ರೈಲ್ವೆ ಇಲಾಖೆ, ದೂರದರ್ಶನ ಇಲಾಖೆ, ಆಲ್ ಇಂಡಿಯಾ ರೇಡಿಯೋ ಇಲಾಖೆ, ಆರೋಗ್ಯ ಇಲಾಖೆ, ವಾಯುಯಾನ ಇಲಾಖೆ, ಬಸ್ ಸೇವೆಗಳು(ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ), ಅಗ್ನಿಶಾಮಕ ಸೇವೆಗಳ ಇಲಾಖೆ, ಭಾರತ ಚುನಾವಣಾ ಆಯೋಗದಿಂದ ಮತದಾನದ ದಿನಂದಂದು ಚುನಾವಣಾ ಕವರೇಜ್‌ಗಾಗಿ ಅಧಿಕೃತಗೊಂಡ ಮಾಧ್ಯಮ ವ್ಯಕ್ತಿಗಳು, ಸಂಚಾರ ಪೊಲೀಸ್ ಇಲಾಖೆ ಹಾಗೂ ಆಂಬ್ಯುಲೆನ್ಸ್ ಅಗತ್ಯ ಸೇವೆಯ 12 ಇಲಾಖೆಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ | ಪರಿಹಾರ ನೀಡಿದ ಸರ್ಕಾರದ ನಡೆಗೆ ಸ್ವಾಗತ ಎಂದ ಪಿಯುಸಿಎಲ್

ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್, ಪೋಸ್ಟಲ್ ಬ್ಯಾಲೆಟ್ ನೋಡಲ್ ಅಧಿಕಾರಿಯಾದ ಪಲ್ಲವಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, 12 ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X