ಪತ್ನಿಯಿಂದಲೇ ಬಂತು ರಿಷಿ ಸುನಕ್‌ಗೆ ಆಪತ್ತು; ಬ್ರಿಟನ್‌ ಪ್ರಧಾನಿ ವಿರುದ್ಧ ಸಂಸತ್‌ ಸಮಿತಿಯಿಂದ ತನಿಖೆ

Date:

Advertisements

ಭಾರತೀಯ ಮೂಲದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರಿಂದಲೇ ತೊಂದರೆಗೆ ಸಿಲುಕಿಕೊಂಡಿದ್ದಾರೆ. ಹೊಸ ಆರೈಕೆ ಯೋಜನೆಯನ್ನು ಘೋಷಿಸುವಾಗ, ರಿಷಿ ಪ್ರಕಟಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕಾರಣ ಸುನಕ್ ಅವರನ್ನು ಸಂಸದೀಯ ಮಾನದಂಡಗಳ ಆಯುಕ್ತರು ತನಿಖೆ ನಡೆಸಲಿದ್ದಾರೆ.

ರಿಷಿ ಸುನಕ್ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮಕ್ಕಳ ಆರೈಕೆ ಕಂಪನಿಯಲ್ಲಿ ಹೂಡಿಕೆದಾರರಾಗಿರುವುದು ತನಿಖೆಗೆ ಪ್ರಮುಖ ಕಾರಣವಾಗಿದೆ.

ಕಮಿಷನರ್ ಡೇನಿಯಲ್ ಗ್ರೀನ್‌ಬರ್ಗ್ ಏಪ್ರಿಲ್ 13 ರಂದು ಪ್ರಧಾನಿ ವಿರುದ್ಧ ತನಿಖೆಯನ್ನು ಆರಂಭಿಸಿದ್ದು, ಈ ಮಾಹಿತಿಯನ್ನು ಆಯುಕ್ತರ ವೆಬ್‌ಸೈಟ್ ಮೂಲಕವೂ ಹಂಚಿಕೊಳ್ಳಲಾಗಿದೆ.

Advertisements

ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಈ ವಿಚಾರಣೆಯನ್ನು ಸಂಸದರಿಗೆ ಸಂಬಂಧಿಸಿದ ನೀತಿ ಸಂಹಿತೆಯ ಪ್ಯಾರಾ 6 ಕ್ಕೆ ಸಂಬಂಧಿಸಿದಂತೆ ಮಾತ್ರ ನಡೆಸಲಾಗುತ್ತದೆ. ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಮಕ್ಕಳ ಆರೈಕೆ ಅಥವಾ ಶಿಶುಪಾಲನಾ ಸಂಸ್ಥೆಯಲ್ಲಿ ಹೂಡಿಕೆದಾರರಾಗಿದ್ದಾರೆ. ಸರ್ಕಾರದಿಂದ ಈ ಕಂಪನಿ ಲಾಭಗಳನ್ನೂ ಪಡೆಯುತ್ತದೆ. ಈ ಪರಿಸ್ಥಿತಿಯಲ್ಲಿ, ಶಿಶುಪಾಲನಾ ಕಂಪನಿಯಲ್ಲಿ ಅವರ ಪತ್ನಿಯ ಪಾಲು ಸರಿಯಾಗಿ ಘೋಷಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತನಿಖೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಿಷಿ ಎಲ್ಲಿಯಾದರೂ ನಿಯಮ ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ”.” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸುಡಾನ್ ಸಂಘರ್ಷ | ಘರ್ಷಣೆಯಲ್ಲಿ ಸಿಲುಕಿರುವ 31 ಕನ್ನಡಿಗರು; ನೆರವಿಗಾಗಿ ಮನವಿ

ಬ್ರಿಟನ್‌ನ ಸಂಸತ್ತಿನಲ್ಲೂ ವಿರೋಧ ಪಕ್ಷಗಳು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ರಿಜಿಸ್ಟರ್ ಆಫ್ ಇಂಟರೆಸ್ಟ್ ಸಮಯದಲ್ಲಿ, ರಿಷಿ ಸುನಕ್ ತನ್ನ ಪತ್ನಿಯ ಆಸ್ತಿಯನ್ನು ಬಿಡುಗಡೆ ಮಾಡಲಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. 

ಪ್ರಧಾನಿ ರಿಷಿ ಸುನಕ್‌ ವಿರುದ್ಧದ ತನಿಖೆಯನ್ನು ಅವರ ವಕ್ತಾರ ಕೂಡ ಖಚಿತಪಡಿಸಿದ್ದು, “ನಾವು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ. ಈ ತನಿಖೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದೂ ಬಯಸಿದ್ದೇವೆ” ಎಂದು ಹೇಳಿದ್ದಾರೆ.

ಅಕ್ಷತಾ ಮೂರ್ತಿ ಅವರು ಸುಮಾರು 600 ಮಿಲಿಯನ್ ಡಾಲರ್‌ ಮೌಲ್ಯದ ಕಂಪನಿಯಲ್ಲಿ ಶೇ. 0.9 ರಷ್ಟು ಪಾಲನ್ನು ಹೊಂದಿದ್ದಾರೆ. ಆದರೆ ವಿಚಾರಣೆಯಲ್ಲಿ ಸುನಕ್ ತಪ್ಪಿತಸ್ಥರೆಂದು ಕಂಡುಬಂದರೆ, ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಮಿತಿಯು ಅವರನ್ನು ಸದಸ್ಯತ್ವದಿಂದ ಅಮಾನತುಗೊಳಿಸುವ ಅಥವಾ ಹೊರಹಾಕುವ ಸಾಧ್ಯತೆಯಿದೆ.

ರಿಷಿ ಸುನಕ್‌, ಸರ್ಕಾರವನ್ನು ಪ್ರತಿ ಹಂತದಲ್ಲೂ ಸಮಗ್ರತೆಯೊಂದಿಗೆ ಮುನ್ನಡೆಸುವುದಾಗಿ ಭರವಸೆ ನೀಡಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅಧಿಕಾರಕ್ಕೆ ಬಂದಿದ್ದರು. ಮುಂದಿನ ವರ್ಷ ಇಂಗ್ಲೆಂಡಿನಲ್ಲಿ ರಾಷ್ಟ್ರೀಯ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

Download Eedina App Android / iOS

X