ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.
ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್(28), ನಿಶ್ಚಿತ್(26) ಮೃತ ದುರ್ದೈವಿಗಳು. ಇವರು ಮೂಲತಃ ಉಡುಪಿ ಮೂಲದ ಅಂಬಲಪಾಡಿಯವರು. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ಜೆ.ಪಿ.ನಗರದಲ್ಲಿ ವಾಸವಾಗಿದ್ದರು.
ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ.
ಮಾ.19ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಖಾಸಗಿ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ ಕೇಳಿದ್ದರು ಎನ್ನಲಾಗಿದೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ
ಸ್ಥಳಕ್ಕೆ ಎಫ್ಎಸ್ಎಲ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.