ಗದಗ | ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿʼ ಅಭಿಯಾನ

Date:

Advertisements

ಗದಗ ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿʼ ಅಭಿಯಾನವನ್ನು ಮಾರ್ಚ್ 15ರಿಂದ ಮಾಹೆಯ ಅಂತ್ಯದವರೆಗೂ  ಹಮ್ಮಿಕೊಂಡಿದ್ದು, ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಒ ಭರತ್ ಎಸ್ ಅವರು ಮನವಿ ಮಾಡಿದ್ದಾರೆ.

ನಮ್ಮ ಜಿಲ್ಲೆಯ ಕೆಲವು ಗ್ರಾಮಗಳಿಂದ ಸಾಮಾನ್ಯವಾಗಿ ಪ್ರತೀ ವರ್ಷ ಬೇಸಿಗೆ ಬಂತೆಂದರೆ ಊರನ್ನು ಬಿಟ್ಟು ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ವಲಸೆ ಹೋಗುವುದು ಸರ್ವೇಸಾಮಾನ್ಯವಾಗಿ ಕಂಡುಬರುತ್ತದೆ. ಹಾಗಾಗಿ, ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳು ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿರುವ ಈ ಅಭಿಯಾನದಲ್ಲಿ ಸ್ಥಳೀಯವಾಗಿ ಉದ್ಯೋಗ ಪಡೆದು ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಎಂದರು.

ಈ ಅಭಿಯಾನದ ಮೂಲ ಉದ್ದೇಶವೇ ಬೇಸಿಗೆ ವಲಸೆಯನ್ನು ನಿಯಂತ್ರಣ ಮಾಡುವುದಾಗಿದ್ದು ಈಗಾಗಲೇ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಕಾಯಕ ಮಿತ್ರ/ತಾಂಡಾ ರೋಜಗಾರ ಮಿತ್ರ ಹಾಗೂ ಕ್ರಿಯಾಶೀಲ ಕಾಯಕ ಬಂಧುಗಳಿಂದ ಉದ್ಯೋಗ ಚೀಟಿದಾರರ ಕುಟುಂಬಗಳ ಮನೆ-ಮನೆ ಭೇಟಿ ಕಾರ್ಯ ನಡೆಯುತ್ತಿದ್ದು ಏಪ್ರೀಲ್ 1ರಿಂದಲೇ ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿದ್ದು, ನಮೂನೆ 6ರಲ್ಲಿ ಕೂಲಿ ಬೇಡಿಕೆ ಪಡೆಯುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

Advertisements

ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ ಆಯುಕ್ತಾಲಯದ ಗುರಿಯನ್ನು ವರ್ಷಕ್ಕಿಂತ‌ ಮೊದಲೇ ಸಾಧಿಸಲಾಗಿದ್ದು. ಈ ಪ್ರಸಕ್ತ ವರ್ಷವು ಸಹ ಬೇಗನೆ ಕೆಲಸ ನೀಡುವ ಮೂಲಕ ಗುಳೆ ತಪ್ಪಿಸಿ ಸ್ಥಳಿಯವಾಗಿ‌ ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ತಳಮಟ್ಟದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು ಹಾಗೂ ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆತರಬಾರದು. ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿಯಿಂದ ಕೂಸಿನ ಮನೆ ಆರಂಭಮಾಡಿದ್ದು, ತಾವುಗಳು ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದ್ದು, ಇದರಿಂದ ಪಾಲಕರಿಬ್ಬರೂ ಯೋಜನೆಯಡಿ ಕೆಲಸಕ್ಕೆ ತೆರಳಿದಾಗ ಮಕ್ಕಳ ಲಾಲನೆ ಪಾಲನೆಗೆ ಕೊರತೆ ನೀಗಿದಂತಾಗಿದೆ. ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು ಯೋಜನೆ ಸೌಲಭ್ಯ ಪಡೆದು ಕೊಳ್ಳುವಂತೆ ಕೋರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X