ಜೆಡಿಎಸ್‌ನವರನ್ನು ಪ್ರಧಾನಿ, ಮುಖ್ಯಮಂತ್ರಿ ಮಾಡಿದ್ದೇ ನಮ್ಮ ಪಕ್ಷ: ಡಿ ಕೆ ಸುರೇಶ್

Date:

Advertisements

ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್ ತಿರುಗೇಟು ನೀಡಿದ್ದಾರೆ.

“ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ” ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದಾಗ ಸುರೇಶ್ ಅವರು ಸದಾಶಿವನಗರ ನಿವಾಸದ ಬಳಿ ಬುಧವಾರ ಪ್ರತಿಕ್ರಿಯಿಸಿದರು.

“ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ” ಎಂದರು.

Advertisements

“ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಹೆಚ್ಚು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಠವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, “ಜಾತ್ಯತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, ‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ʼಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ʼರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ -ಎಂಬೆಲ್ಲ ಹೇಳಿಕೆಗಳನ್ನು ಜನರಿಗೆ ತೋರಿಸಿ” ಎಂದರು.

ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಕೇಳಿದಾಗ “ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ” ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ

ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X