ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಮುಂಬರುವ ಹೋಳಿ ಹಬ್ಬದ ಹಿನ್ನೆಲೆ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಮಂಡಳಿಯು, “ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಈ ಸಂದರ್ಭದಲ್ಲಿ ಮನೋರಂಜನೆಯಾಗಿ ವಾಣಿಜ್ಯ ಉದ್ದೇಶದಿಂದ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಸಮಂಜಸವಾಗಿರುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ವಶ
“ಮನೋರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವಂತಹ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್‌ಗಳಿಗೆ ಸಾರ್ವಜನಿಕ ಹಿತದೃಷ್ಠಿಯಿಂದ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.