ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗೇಟ್ ಬಳಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಗಾಂಧಿನಗರ ನಿವಾಸಿ ಮಂಜುನಾಥ (50) ಮೃತಪಟ್ಟ ದುರ್ದೈವಿ.
ಕೆಲಸದ ನಿಮಿತ್ತ ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರ ನಗರಕ್ಕೆ ತೆರಳುವ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಕಾರು ಚಾಲಕನ ನಿಯಂತ್ರಣ ತಪ್ಪಿದಕ್ಕೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಮೋದಿ ವೈಫಲ್ಯ-1 | ಕೊರೊನಾಗೆ ದೇಶ ತತ್ತರ; 20 ಲಕ್ಷ ಕೋಟಿ ಏನಾಯ್ತು? ಪಿಎಂ-ಕೇರ್ಸ್ ಎಲ್ಲೋಯ್ತು?
ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.