ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ

Date:

Advertisements

ಅಮೆರಿಕಾದ ಕ್ಲೀವ್‌ಲ್ಯಾಂಡ್‌ನಲ್ಲಿ ಮಾರ್ಚ್‌ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹುಡುಕಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ನಾಚಾರಂ ಮೂಲದ ಮೊಹಮ್ಮದ್ ಅಬ್ದುಲ್ ಅರ್ಫಾತ್ ಅವರು ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ‘ಐಟಿ’ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಭಾರತದಿಂದ 2023ರ ಮೇನಲ್ಲಿ ಅಮೆರಿಕಾಗೆ ತೆರಳಿದ್ದರು.

“ಮಾರ್ಚ್ 7 ರಂದು ಅರ್ಫಾತ್ ತನ್ನೊಂದಿಗೆ ಕೊನೆಯದಾಗಿ ಮಾತನಾಡಿದ. ಆ ಬಳಿಕ, ಆತ ನಮ್ಮ ಕುಟುಂಬದ ಸಂಪರ್ಕಕ್ಕೆ ಸಿಕ್ಕಿಲ್ಲ. ಆತನ ಮೊಬೈಲ್ ಸ್ವಿಚ್ ಆಫ್‌ ಆಗಿದೆ” ಎಂದು ಆತನ ತಂದೆ ಮೊಹಮ್ಮದ್ ಸಲೀಂ ಹೇಳಿದ್ದಾರೆ.

Advertisements

ಅರ್ಫಾತ್ ಅವರ ಕುಟುಂಬ ಮತ್ತು ಅಮೆರಿಕಾದಲ್ಲಿರುವ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಭಾರತೀಯ ರಾಯಭಾರಿ ಕಚೆರಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಮಾರ್ಚ್ 19 ರಂದು, ಅರ್ಫಾತ್ ಅವರ ಕುಟುಂಬಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತು. “ಅರ್ಫಾತ್‌ನನ್ನು ಡ್ರಗ್ಸ್ ಮಾರಾಟ ಮಾಡುವ ಗ್ಯಾಂಗ್ ಅಪಹರಿಸಿದೆ. ಆತನನ್ನು ಬಿಡುಗಡೆ ಮಾಡಲು 1,200 ಅಮೆರಿಕನ್ ಡಾಲರ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ, ಆತನ ಕಿಡ್ನಿಗಳನ್ನು ಮಾರಾಟ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ” ಎಂದು ಅರ್ಘಾತ್‌ನ ತಂದೆ ಸಲೀಂ ತಿಳಿಸಿದ್ದಾರೆ.

ತಮ್ಮ ಮಗನನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರ್ಫಾತ್ ಪೋಷಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಸಲೀಂ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೂ ಪತ್ರ ಬರೆದಿದ್ದಾರೆ.

ಈ ಘಟನೆಯು ಅಮೆರಿಕಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವ ಪ್ರಕರಣಗಳಲ್ಲಿ ಒಂದಾಗಿದೆ. ಅಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಮತ್ತು ಭದ್ರತೆಯಲ್ಲಿ ತೊಡಕು ಎದ್ದು ಕಾಣುತ್ತಿದೆ.

ಈ ವರ್ಷದ ಆರಂಭದಿಂದ, ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಹಲವಾರು ಪ್ರಕರಣಗಳು ವರದಿಯಾಗಿದ್ದವು. ಬೋಸ್ಟನ್‌ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿ ಅಭಿಜಿತ್ ಪರುಚೂರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿತ್ತು.

ಪರ್ಡ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಭಾರತೀಯ ಮೂಲದ ಸಮೀರ್ ಕಾಮತ್ (23) ಫೆಬ್ರವರಿಯಲ್ಲಿ ಅಮೆರಿಕಾದ ಇಂಡಿಯಾನಾದಲ್ಲಿ ಶವವಾಗಿ ಪತ್ತೆಯಾಗಿದ್ದರು. ಜನವರಿಯಲ್ಲಿ, ಇಲಿನಾಯ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ, 18 ವರ್ಷದ ಅಕುಲ್ ಧವನ್ ಎಂಬಾತ ಕ್ಯಾಂಪಸ್ ಕಟ್ಟಡದ ಹೊರಗೆ ಸಾವನ್ನಪ್ಪಿದ್ದರು. ಆತ ಹೈಪೋಥರ್ಮಿಯಾದಿಂದ ಸಾವನ್ನಪ್ಪಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಜನವರಿಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಜಾರ್ಜಿಯಾದಲ್ಲಿ ಮಾದಕ ವ್ಯಸನಿಗಳು 25 ವರ್ಷದ ಭಾರತೀಯ ವಿದ್ಯಾರ್ಥಿ ವಿವೇಕ್ ಸೈನಿಯನ್ನು ಹೊಡೆದು ಕೊಂದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X