ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೊರನಡೆದ ಘಟನೆ ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬುಧವಾರ ತಿಪಟೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ, ಕೇಂದ್ರ ಸರ್ಕಾರದಿಂದ ಬರುತ್ತಿರುವ ವಿದ್ಯಾರ್ಥಿ ವೇತನ ವಿತರಣೆ ತಡವಾಗಲು ಕಾರಣವೇನು? ಕೊಬ್ಬರಿ ಬೆಲೆ ನಿರಂತರ ಕುಸಿಯಲು ಕಾರಣವೇನು? ತಿಪಟೂರಿನ ಮೂಲಕ ಪ್ಯಾಸೆಂಜರ್ ರೈಲುಗಳು ಸಂಚರಿಸುತ್ತಿದ್ದವು. ಈಗ ಸ್ಥಗಿತಗೊಳಿಸಲು ಕಾರಣವೇನು ಎಂಬ ಪರ್ತಕರ್ತರ ಪ್ರಶ್ನೆಗಳಿಗೆ ಬಿಜೆಪಿ ಅಭ್ಯರ್ಥಿ ಉತ್ತರಿಸಲು ತಡಬಡಾಯಿಸಿದರು. ಕೊನೆಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ಹೊರ ನಡೆದರು.
ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಮೂವರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು; 20 ಸಿಬ್ಬಂದಿ ಕರ್ತವ್ಯ
ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ ಸುದ್ದಿಗೋಷ್ಠಿಯಲ್ಲಿ ಕೊಬ್ಬರಿ ಬೆಲೆ ಕುಸಿತ ಸೇರಿದಂತೆ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಪ್ರಶ್ನೆಗಳನ್ನು ಕೇಳಿದ್ದರು, ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುದ್ದಿಗೊಷ್ಠಿಯಿಂದ ಹೊರ ನಡೆದು ಸುದ್ದಿಯಾಗಿದ್ದಾರೆ. ಸಂಸದ ಜಿ. ಎಸ್. ಬಸವರಾಜು, ಜೆಡಿಎಸ್ ಮುಖಂಡ ಶಾಂತಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.