ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಬುಧುವಾರ ರಾತ್ರಿ ಲಂಚ ಪಡೆಯುವಾಗ ಲೋಕಯುಕ್ತರ ಬಲೆಗೆ ಬಿದ್ದಿದ್ದಾರೆ.
ತುಮಕೂರು ಲೋಕಾಯುಕ್ತ ಡಿವೈಎಸ್‌ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ತಂಡ ಕಾರ್ಯಚರಣೆ ನಡೆಸಿ ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ.
ಜಮೀನಿನ ಭೂಪರಿವರ್ತನೆ ಮಾಡಿಕೊಡಲು ₹30,000 ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ಸಿಕ್ಕಿಬಿದಿದ್ದಾರೆ. ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗ್ರಾಮದ ರೖತ ಮಲ್ಲಿಕಾರ್ಜನ್ ಅವರ 33 ಗುಂಟೆ ಭೂಮಿಯನ್ನು ಭೂಪರಿವರ್ತನೆ ಮಾಡಿಕೊಡಲು ₹3 ಲಕ್ಷ ಲಂಚಕ್ಕೆ ಬೇಡಿ ಇಟ್ಟಿದ್ದರು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ
ಬೇಡಿಕೆ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ₹20,000 ಲಂಚ ಪಡೆದಿದ್ದರು. ರಾತ್ರಿ 8ರ ಸಮಯದಲ್ಲಿ ₹30,000 ಹಣ ಪಡೆಯುವಾಗ ಲೋಕಯುಕ್ತರ ಬಲೆಗೆ ಬಿದ್ದಿದ್ದಾರೆ.