- ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಪ್ರವೀಣ ಕಮ್ಮಾರ
- ಪ್ರವೀಣ್ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಯುವಕನೊಬ್ಬನನ್ನು ಅಪರಿಚಿತರ ಗುಂಪೊಂದು ಕೊಲೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ.
ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ
ದುಷ್ಕರ್ಮಿಗಳು ಹೊಟ್ಟೆಗೆ ತೀವ್ರವಾಗಿ ಚುಚ್ಚಿದ್ದರಿಂದ ಪ್ರವೀಣ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆತನನ್ನು ಸ್ಥಳೀಯರು ಧಾರವಾಡದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನೂ ಪ್ರವೀಣ್ ಕಮ್ಮಾರ ಅವರ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.