- ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡರಿಗೆ ಐಟಿ ಶಾಕ್
- ಬೆಂಗಳೂರಿನ 50 ಕಡೆಗಳಲ್ಲಿ ಬುಧವಾರ ಐಟಿ ಅಧಿಕಾರಿಗಳ ದಾಳಿ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ಕಾಂಗ್ರಸ್ ಮುಖಂಡ ಕೆಜಿಎಫ್ ಬಾಬುಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬುಧವಾರ ಬೆಳಗ್ಗೆಯಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ
ಈ ಹಿಂದೆಯೂ ಕೂಡ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಮೇ 28ರಂದು ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೆಜಿಎಫ್ ಬಾಬು 1,741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.