ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು ನೋಂದಾಯಿಸಲು ಬೆಳಗಾವಿಯಾದ್ಯಂತ ಸೇವಾ ಕೇಂದ್ರಗಳನ್ನು ತೆರೆದಿತ್ತು. ಇದೀಗ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಲೋಕಸಭೆ ಚುನಾವಣೆಯ ಘೋಷಣೆಗೆ ಒಂದು ದಿನ ಮೊದಲು (ಮಾರ್ಚ್ 16 ರಂದು) ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ತಿಳಿದುಬಂದಿದೆ.
“ಈ ಹಣವನ್ನು ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ತಲಾ ₹25 ಲಕ್ಷ ವೆಚ್ಚದಲ್ಲಿ ಮಹಾರಾಷ್ಟ್ರ ಸಾಂಸ್ಕೃತಿಕ ಭವನ (ಮಹಾರಾಷ್ಟ್ರ ಸಾಂಸ್ಕೃತಿಕ ಸಭಾಂಗಣ) ನಿರ್ಮಾಣಕ್ಕೆ ಬಳಸಲಾಗುವುದು” ಎಂದು ಸ್ಥಳೀಯರು ತಿಳಿಸಿದ್ದಾರೆ.
“ಬೀದರ್‌ನಲ್ಲಿ ಮರಾಠಿ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ರಘುನಾಥ ಮಹಾರಾಜ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವಂತೆ ₹25 ಲಕ್ಷ ಮಂಜೂರು ಮಾಡಿದ್ದು, ಅದೇ ಜಿಲ್ಲೆಯ ಸತ್ಯಂ ಶಿವಂ ಸುಂದರಂ ಅಭಿವೃದ್ಧಿ ಸಂಘಕ್ಕೆ ಮರಾಠಿಗರಲ್ಲಿ ತನ್ನ ಸಾಮಾಜಿಕ ಕಾರ್ಯವನ್ನು ಮುಂದುವರಿಸಲು ₹25 ಲಕ್ಷವನ್ನು ಬಿಡುಗಡೆ ಮಾಡಲಾಗಿದೆ” ಎಂದು ಸ್ಥಳೀಯ ಮಾಹಿತಿಯಿಂದ ತಿಳಿದುಬಂದಿದೆ.
ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗೆ ಶಿಕ್ಷಣ ಸಂಬಂಧಿತ ಸ್ಟೇಷನರಿ ವಸ್ತುಗಳು, ಪಠ್ಯಪುಸ್ತಕಗಳು ಮತ್ತು ಆಂಬ್ಯುಲೆನ್ಸ್ ಸೇರಿದಂತೆ ಆಸ್ಪತ್ರೆಗಳಿಗೆ ಸಂಬಂಧಿಸಿದ ಉಪಕರಣಗಳನ್ನು ಖರೀದಿಸಲು ಈ ಹಣವನ್ನು ಬಳಸಿಕೊಳ್ಳಲು ಸಂಘಕ್ಕೆ ಸೂಚನೆ ನೀಡಲಾಗಿದೆ.
“ಕರ್ನಾಟಕ ಸರ್ಕಾರಕ್ಕೆ ಹೋಲಿಸಿದರೆ ಮಹಾರಾಷ್ಟ್ರ ಸರ್ಕಾರದ ಚಟುವಟಿಕೆಗಳು ಗಡಿ ಪ್ರದೇಶದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತದೆ ಎಂಬುದನ್ನು ತೋರಿಸುತ್ತದೆ” ಎಂದು ಹಿರಿಯ ಕನ್ನಡ ಮುಖಂಡ ಮತ್ತು ಕರ್ನಾಟಕ ಗಡಿ ಸಂರಕ್ಷಣಾ ಸಮಿತಿಯ ಸದಸ್ಯ ಅಶೋಕ್ ಚಂದರಗಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಲೋಕಯುಕ್ತರ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್
ಬೆಳಗಾವಿಯ ಮಹಾರಾಷ್ಟ್ರ ಪರ ಸಂಘಟನೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, “ಬಿಡುಗಡೆ ಮಾಡಿದ ಮೊತ್ತವು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ರಾಜ್ಯದ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ” ಎಂದು ಸಂತಸ ವ್ಯಕ್ತಪಡಿಸಿದರು.
ಎಂಇಎಸ್ ವಕ್ತಾರ ವಿಕಾಸ ಕಲಘಟಗಿ ಮಾತನಾಡಿ, “ಸರ್ಕಾರದಿಂದ ಬಿಡುಗಡೆಯಾಗುವ ಮೊತ್ತವನ್ನು ರಾಜ್ಯದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಸಂಸ್ಕೃತಿಯನ್ನು ಜೀವಂತವಾಗಿಡಲು ಮತ್ತು ಮರಾಠಿ ಭಾಷೆಯಲ್ಲಿ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬಳಸಲಾಗುತ್ತದೆ” ಎಂದರು.