ವಿಜಯಪುರ | ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರಗೆ ದಲಿತ ಸಂಘಟನೆಗಳ ಬೆಂಬಲ

Date:

Advertisements

ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.

ಮಹಾಂತೇಶ ಸಾಸಾಬಾಳ ಅವರಿಂದ ಕ್ರಾಂತಿಗೀತೆಯೊಂದಿಗೆ ಆರಂಭವಾದ ಸಭೆಯಲ್ಲಿ, ಅಭಿಷೇಕ ಚಕ್ರವರ್ತಿ, ಹಿರಿಯ ಪತ್ರಕರ್ತರಾದ  ಅನಿಲ ಹೊಸಮನಿ, ಚಂದ್ರಕಾಂತ ಸಿಂಗೆ, ಅಶೋಕ ಚಲವಾದಿ, ವೈ.ಸಿ. ಮಯೂರ, ಚೆನ್ನು ಕಟ್ಟಿಮನಿ, ಅಡಿವೆಪ್ಪ ಸಾಲಗಲ್ಕ, ನಾಗರಾಜ ಲಂಬು, ಸಿದ್ದು ರಾಯಣ್ಣವರ, ಸಂಜು ಕಂಬಾಗಿ, ಪರಶುರಾಮ ದಿಂಡವಾರ, ಪರಶುರಾಮ ಕಾಂಬಳೆ, ಅಶೋಕ ಚಲವಾದಿ, ಮಲ್ಲು ಜಾಲಗೇರಿ, ಶಂಕರ ಚಲವಾದಿ, ಆನಂದ ಔದಿ, ವಿನಾಯಕ ಗುಣಸಾಗರ, ಮಹಾದೇವ ಬನಸೋಡೆ, ರಾಜು ತೊರವಿ ಮತ್ತಿತರರು ಮಾತನಾಡಿ ದಲಿತ ಸಂಘರ್ಷ ಸಮಿತಿಯ ಮೂಲಕ ರಾಜಕೀಯ ಪ್ರವೇಶ ಮಾಡಿರುವ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸೋಣ ಎಂದು ಒಕ್ಕೊರಲಿನಿಂದ ಶಪಥಗೈದರು.

ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ದಸಂಸ ಎಲ್ಲಾ ಬಣಗಳ ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advertisements

ಇದೇ ಸಂದರ್ಭದಲ್ಲಿ 97 ವರ್ಷಗಳ ಹಿಂದೆ (ಮಾರ್ಚ್ 20, 1927) ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ನಡೆಸಿದ್ದ ಮಹಾಡ್ ಚೌದಾರ ಕೆರೆಯ ನೀರು ಮುಟ್ಟುವ ಹಕ್ಕು ಪ್ರತಿಪಾದಿಸುವ ಸತ್ಯಾಗ್ರಹವನ್ನು ಸ್ಮರಿಸಲಾಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು...

ಬೀದರ್‌ | ದೇಶಕ್ಕೆ ಬರಹಗಾರರ ಕೊಡುಗೆ ಅನನ್ಯ

ದೇಶದ ಸ್ವಾತಂತ್ರ್ಯಕ್ಕೆ ಸಾಹಿತಿ, ಬರಹಗಾರರ ಕೊಡುಗೆ ಅನನ್ಯವಾಗಿದೆ. ಲೇಖನಿ ಖಡ್ಗಕ್ಕಿಂತ ಹರಿತವಾದದ್ದು,...

ಮೈಸೂರು | ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ; ಮೀಲಾದ್ ಘೋಷಣಾ ಜಾಥಾ

ಮೈಸೂರು ನಗರದ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್ ವೃತ್ತದಲ್ಲಿ 'ಸುನ್ನಿ ಯುವಜನ...

ಮೈಸೂರು | ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿ

ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ...

Download Eedina App Android / iOS

X