ಯುವ, ಮಹಿಳಾ ಹಾಗೂ ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, “ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು”ಎಂದರು.

ಇಂದು ಸಂಜೆ ಅಂತಿಮ ಪಟ್ಟಿ

Advertisements

“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.ʼ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಸಚಿವನಾಗಿದ್ದೇನೆ

ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಹೇಳಿದರು.

“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು.

ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ” ಎಂದರು.

ಧಾರ್ಮಿಕ ಸಂಸ್ಥೆಗಳ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದಾಗ “ಈ ವಿಚಾರದಲ್ಲಿ ಬಿಜೆಪಿಯದ್ದು ಇಬ್ಬಗೆಯ ನೀತಿ. ಸಣ್ಣ, ಸಣ್ಣ ದೇವಾಲಯಗಳ, ಅರ್ಚಕರ ಅಭಿವೃದ್ದಿಗೆ ಪೂರಕವಾಗಿದ್ದ ಈ ಮಸೂದೆಯನ್ನು ಬಿಜೆಪಿ ವಿರೋಧಿಸಿ ತನ್ನ ನಿಜ ಬಣ್ಣವನ್ನು ಬಯಲುಮಾಡಿಕೊಂಡಿದೆ. ಮುಂದಿನ ಜೂನ್ ತಿಂಗಳ ಅಧಿವೇಶನದಲ್ಲಿ ಬಹುಮತ ಸಿಗಲಿದೆ” ಎಂದು ಉತ್ತರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X