ಗದಗ | ರಾಮಕೃಷ್ಣ ದೊಡ್ಡಮನಿಗೆ ಕಾಂಗ್ರೆಸ್‌ನಲ್ಲಿ ನೆಲೆ ಕೊಡಬಾರದು: ಡಿಎಸ್‌ಎಸ್‌

Date:

Advertisements

ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್‌ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ ಸುರೇಶ ನಂದೆನ್ನವರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ನಮ್ಮ ಸಮಾಜದವರು 70 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಪ್ರಾಮಾಣಿಕವಾಗಿ ಮತದಾನ ಮಾಡುತ್ತಾ ಬಂದಿದ್ದೇವೆ. ನಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದೇವೆ ಎಂದರು.

ಆದರೆ, ಇಂದು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸುಜಾತ ದೊಡ್ಡಮನಿ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡಿತ್ತು. ಅದು ನಮ್ಮ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ಸಿಕ್ಕ ನ್ಯಾಯವೆಂದು ಭಾವಿಸಿದ್ದೇವು. ಆದರೆ, ರಾಮಕೃಷ್ಣ ದೊಡ್ಡಮನಿಯವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಶಿರಹಟ್ಟಿ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತ ದೊಡ್ಡಮನಿ ಅವರನ್ನು ಸೋಲಿಲಿಕ್ಕೆ ಕಾರಣರಾಗಿದ್ದರು. ಅಂದರೆ, ನಮ್ಮ ಮಾದಿಗ ಸಮುದಾಯಕ್ಕೆ ಸೋಲಲು ಕಾರಣರಾಗಿದ್ದರು ಎಂದ ಹೇಳಿದರೆ ತಪ್ಪಾಗಲಾರದು, ಎಂದುರು.

Advertisements

ರಾಮಕೃಷ್ಣ ದೊಡ್ಡಮನಿ ಅವರನ್ನು ಕೆಪಿಸಿಸಿಯಿಂದ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಬ್ಯಾನ್ ಮಾಡಿದ್ದರು. ಆದರೆ, ಇಂದು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿಢೀರನೆ ರಾಮಕೃಷ್ಣ ದೊಡ್ಡಮನಿಯವರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದರಿಂದ ನಮ್ಮ ಮಾದಿಗ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗುತ್ತದೆ ಎಂದರು.

ನಾವು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಮಕೃಷ್ಣ ದೊಡ್ಡಮನಿಯವರಿಗೆ ಟಿಕೆಟ್ ಘೋಷಣೆ ಮಾಡಿತ್ತು. ಅಂದು ನಾವು ಹಾಗೂ ನಮ್ಮ ಸಮುದಾಯದವರು ರಾಮಕೃಷ್ಣ ದೊಡ್ಡಮನಿಯವರ ಪರವಾಗಿ ದುಡಿದು,  ಶಿರಹಟ್ಟಿ ಮತ ಕ್ಷೇತ್ರದ ಎಮ್‌ಎಲ್‌ಎ ಆಗಲು ನಾವು ನಮ್ಮ ಸಮಾಜದವರು ಪ್ರಮುಖ ಪಾತ್ರ ವಹಿಸಿದ್ದೇವು. ಆದರೆ, ಇಂದು ರಾಮಕೃಷ್ಣ ದೊಡ್ಡಮನಿಯವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದ ಅವರು,

ನಮಗೆ ಅನ್ಯಾಯವಾಗಿದ್ದರಿಂದ ರಾಮಕೃಷ್ಣ ದೊಡ್ಡಮನಿಯವರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಹಾಗೂ ರಾಮಕೃಷ್ಣ ದೊಡ್ಡಮನಿಯವರಿಗೆ ಮಾತ್ರ ವಿರೋಧ ಇದ್ದೇವೆ, ಅವರ ಹಿಂಬಾಲಕರಿಗಾಗಲಿ ಅಥವಾ ಅವರ ಸಮುದಾಯಕ್ಕಾಗಲಿ ನಾವು ವಿರೋಧಿಗಳಲ್ಲ. ಆದ್ದರಿಂದ ರಾಮಕೃಷ್ಣ ದೊಡ್ಡಮನಿಯವರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಸುರೇಶ ನಂದೆನ್ನವರ ಹೇಳಿದರು.

ಒಂದು ವೇಳೆ ಸೇರಿಸಿದರೆ ನಾವು ಗದಗ-ಹಾವೇರಿ ಮುಖಂಡರೊಂದಿಗೆ ಚರ್ಚಿಸಿ ನಾವು ಮುಂದಿನ ದಿನಮಾನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಯಾವ ರೀತಿ ಮಾಡಬೇಕೆಂದು ಸಿದ್ಧರಾಗುತ್ತೇವೆ ಎಂದು ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮೋಹನ್ ಕರ್ಜೀಗಿ, ಫಕ್ಕೀರೇಶ ನಡವಿನಮನಿ, ನಾಗೇಶ್ ಅಮರಾಪೂರ, ಮಲ್ಲೇಶ ಬಸವನಾಯ್ಕರ, ಗಾಳೆಪ್ಪ ಹರಿಜನ, ದೇವರಾಜ ನಡವಿನಕೇರಿ, ಸಂತೋಷ್ ಹಾದಿಮನಿ, ಜಗದೀಶ ಹುಲಿಗೆಮ್ಮನವರ, ಮಾಂತೇಶ ಗುಡಸಲಮನಿ, ಸಂತೋಷ್ ನಂದೆಣ್ಣನವರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ, ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X