ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆದು, ಹುರಿಯಾಳುಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ ಬಳಿಕ ಈ ಪಟ್ಟಿ ಬಿಡುಗಡೆಗೊಂಡಿದೆ.
कांग्रेस अध्यक्ष श्री @kharge की अध्यक्षता में आयोजित ‘केंद्रीय चुनाव समिति’ की बैठक में लोकसभा चुनाव, 2024 के लिए 57 लोकसभा सीटों पर कांग्रेस उम्मीदवारों के नाम की तीसरी लिस्ट जारी की गई। pic.twitter.com/7TMkx4faZ4
— Congress (@INCIndia) March 21, 2024
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಕೆ ಜೆ ಜಾರ್ಜ್ ಮತ್ತಿತರರು ಈ ಸಭೆಯಲ್ಲಿ ಭಾಗಿಯಾಗಿ, ಉಳಿದಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರದ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಿದೆ.
ಕಾಂಗ್ರೆಸ್ ಈಗಾಗಲೇ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈಗ ಪ್ರಕಟಗೊಂಡಿರುವ 17 ಕ್ಷೇತ್ರಗಳ ಪೈಕಿ ಬಾಗಲಕೋಟೆಯಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತ ಪಾಟೀಲ, ಚಿಕ್ಕೋಡಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಹಾಗೂ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹೆಸರನ್ನು ಅಂತಿಮಗೊಳಿಸಿ, ಟಿಕೆಟ್ ನೀಡಲಾಗಿದೆ. ಈ ಮೂಲಕ ಐದು ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಮಣೆ ಹಾಕಲಾಗಿದೆ.
ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಸೇರಿದಂತೆ ಒಟ್ಟು 4 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಪ್ರಕಟಿಸಿಲ್ಲ.
- ಬೆಂಗಳೂರು ಉತ್ತರ – ಪ್ರೊ.ಎಂ.ವಿ. ರಾಜೀವ್ ಗೌಡ
- ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
- ಬೆಂಗಳೂರು ಸೆಂಟ್ರಲ್ – ಮನ್ಸೂರ್ ಆಲಿಖಾನ್
- ಮೈಸೂರು – ಎಂ.ಲಕ್ಷ್ಮಣ್
- ರಾಯಚೂರು – ಜಿ. ಕುಮಾರನಾಯ್ಕ್
- ಕೊಪ್ಪಳ – ರಾಜಶೇಖರ ಬಸವರಾಜ್ ಹಿಟ್ನಾಳ್
- ಬೀದರ್ – ಸಾಗರ್ ಖಂಡ್ರೆ
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
- ಉತ್ತರ ಕನ್ನಡ – ಡಾ. ಅಂಜಲಿ ನಿಂಬಾಳ್ಕರ್
- ದಕ್ಷಿಣ ಕನ್ನಡ – ಆರ್.ಪದ್ಮರಾಜ್
- ಚಿತ್ರದುರ್ಗ – ಬಿ ಎನ್ ಚಂದ್ರಪ್ಪ
- ಕಲಬುರಗಿ – ರಾಧಾಕೃಷ್ಣ
- ಧಾರವಾಡ – ವಿನೋದ ಅಸೂಟಿ
- ಬಾಗಲಕೋಟೆ – ಸಂಯುಕ್ತ ಪಾಟೀಲ್
- ಉಡುಪಿ-ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗಡೆ
- ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
- ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
