ಚಿತ್ರದುರ್ಗದಿಂದ ಮರು ಬಳಕೆ ಉಡಾವಣಾ ವಾಹನವನ್ನು ಯಶಸ್ವಿಯಾಗಿ ಪ್ರಯೋಗಗೊಳಿಸಿದ ಇಸ್ರೋ

Date:

Advertisements

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಿತ್ರದುರ್ಗದ ಚಳ್ಳೆಕೆರೆಯಿಂದ ಆರ್‌ಎಲ್‌ವಿ ಎಲ್‌ಇಎಕ್ಸ್‌-02 ಮೂಲಕ ಪುಷ್ಪಕ್‌ ಎಂಬ ಮರುಬಳಕೆ ಉಡಾವಣಾ ವಾಹನ (ಆರ್‌ಎಲ್‌ವಿ-ಟಿಡಿ) ವನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ.

ಚಳ್ಳೆಕೆರೆಯ ವೈಮಾನಿಕ ಪರೀಕ್ಷಾ ಶ್ರೇಣಿಯ ಸ್ಥಳದಲ್ಲಿ ಆರ್‌ಎಲ್‌ವಿ-ಟಿಡಿ ಅನ್ನು ಯಶಸ್ವಿಯಾಗಿ ಪ್ರಾಯೋಗಿಕವಾಗಿ ಪರೀಕ್ಷೆಗೊಳಪಡಿಸಲಾಯಿತು.

ಭಾರತೀಯ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ನಿಂದ 4.5 ಕಿ.ಮೀ ಎತ್ತರದಿಂದ ಆರ್‌ಎಲ್‌ವಿ-ಎಲ್‌ಇಎಕ್ಸ್-02 ಉಡಾವಣಾ ವಾಹಕವನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಯಿತು.

Advertisements

ರನ್‌ವೇ ಮೂಲಕ 4 ಕಿ.ಮೀ. ಎತ್ತರದಿಂದ ಪುಷ್ಪಕ್‌ ಪೂರ್ವ ನಿರ್ಧಾರಿತ ಪಿಲಿತ್‌ ಬಾಕ್ಸ್‌ ನಿಯತಾಂಕಗಳನ್ನು ಪಡೆದ ಮೂಲಕ ಬಿಡುಗಡೆ ಮಾಡಲಾಯಿತು ಎಂದು ಇಸ್ರೋ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ

ಈ ಯೋಜನೆಯನ್ನು ವಿಕ್ರಮ್ ಸಾರಾಬಾಯ್‌ ಬಾಹ್ಯಾಕಾಶ ಕೇಂದ್ರದ ನೇತೃತ್ವದಲ್ಲಿ ಸಂಪೂರ್ಣ ಮರುಬಳಕೆ ಮಾಡಬಹುದಾದ ಉಡಾವಣೆಗೆ ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬಾಹ್ಯಾಕಾಶ ಸಂಸ್ಥೆಯ ಪ್ರಯತ್ನದ ಭಾಗ ಇದಾಗಿದೆ. ಅಲ್ಲದೆ ಕಡಿಮೆ ವೆಚ್ಚದಲ್ಲಿ ಬಾಹ್ಯಾಕಾಶವನ್ನು ಪ್ರವೇಶಿಸುವ ಯತ್ನವಿದು ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

ಇದು ಎರಡನೇ ಪ್ರಯೋಗಾರ್ಥ ಪರೀಕ್ಷೆಯಾಗಿದ್ದು, ಈ ಮೊದಲು ಆರ್‌ಎಲ್‌ವಿ ಎಲ್‌ಇಎಕ್ಸ್-01 ಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಏಪ್ರಿಲ್ 2023ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಮೊದಲ ಪ್ರಯೋಗದ ಫಲಿತಾಂಶಗಳನ್ನು ಆಧರಿಸಿ ಇಸ್ರೋ ಲ್ಯಾಂಡಿಂಗ್‌ ಲೋಡುಗಳನ್ನು ತಡೆದುಕೊಳ್ಳಲು ಹಾಗೂ ಲ್ಯಾಂಡಿಂಗ್ ಲೋಡುಗಳನ್ನು ಕಡಿಮೆಗೊಳಿಸಲು ಈ ಪ್ರಯೋಗವನ್ನು ಮಾಡಲಾಗಿತ್ತು.

ಯೋಜನೆಯನ್ನು ದೋಷರಹಿತವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯ ಮೂಲದ ಸಬೀಹ್ ಖಾನ್ ಆ್ಯಪಲ್ ಕಂಪನಿಯ ಸಿಒಒ ಆಗಿ ನೇಮಕ

ದುಬಾರಿ ಬೆಲೆಯ ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ...

ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಡಾಕಿಂಗ್‌ ಯಶಸ್ವಿ: ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿರುವ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಿದ್ದ...

ಸೊಳ್ಳೆ ಗಾತ್ರದ ಮೈಕ್ರೋ ಡ್ರೋನ್‌ಗಳನ್ನು ತಯಾರಿಸಿದ ಚೀನಾ

ಸೊಳ್ಳೆ ಗಾತ್ರದ ಮೈಕ್ರೋ ಡ್ರೋನ್‌ʼಗಳನ್ನು ಚೀನಾದ ವಿಜ್ಞಾನಿಗಳು ತಯಾರಿಸಿದ್ದಾರೆ. ಸೊಳ್ಳೆ ಗಾತ್ರದ...

ಬೆಂಗಳೂರು | ಡಿಜಿಟಲ್ ಅರೆಸ್ಟ್ ಮೂಲಕ ವೃದ್ಧ ದಂಪತಿಗೆ 4.79 ಕೋಟಿ ರೂ. ವಂಚನೆ

ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ಸುಮಾರು 4.79 ಕೋಟಿ ರೂಪಾಯಿ...

Download Eedina App Android / iOS

X