ವೀಸಾಗಾಗಿ ₹50 ಲಕ್ಷ ಲಂಚ: ಕಾರ್ತಿ ಚಿದಂಬರಂ ವಿರುದ್ಧ ಇಡಿ ದೂರು

Date:

Advertisements

2010 ಮತ್ತು 2014ರ ನಡುವೆ ಪಂಜಾಬ್‌ನ ಮಾನ್ಸಾದಲ್ಲಿ 1,980 ಮೆಗಾವ್ಯಾಟ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಕಾಮಗಾರಿಗಾಗಿ ಚೀನೀ ಪ್ರಜೆಗಳನ್ನು ಕರೆತರಲು ವೀಸಾಗಳನ್ನು ವಿತರಿಸುವುದಕ್ಕಾಗಿ ಲಂಚ ಪಡೆದಿದ್ದಾರೆ ಎಂದು ಕಾರ್ತಿ ಪಿ ಚಿದಂಬರಂ ಮತ್ತು ಇತರ ನಾಲ್ವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇದಾದ ಬಳಿಕ, ಜಾರಿ ನಿರ್ದೇಶನಾಲಯವು (ಇಡಿ) ಪ್ರಾಸಿಕ್ಯೂಷನ್ ದಾಖಲಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)-2002ರ ನಿಬಂಧನೆಗಳ ಅಡಿಯಲ್ಲಿ ಹೊಸದಿಲ್ಲಿಯ ವಿಶೇಷ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧರಿಸಿ ಇಡಿ ತನಿಖೆ ನಡೆಸಿದೆ. ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ, ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್, ಎಸ್ ಭಾಸ್ಕರರಾಮನ್, ತಲವಂಡಿ ಸಾಬೋ ಪವರ್ ಲಿಮಿಟೆಡ್ ಮತ್ತು ಇತರರ ವಿರುದ್ಧ ಇಡಿ ದೂರು ದಾಖಲಿಸಿದೆ.

Advertisements

ಮಾರ್ಚ್ 19ರಂದು ನ್ಯಾಯಾಲಯವು ಪ್ರಾಸಿಕ್ಯೂಷನ್ ದೂರನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಮಾನ್ಸಾದಲ್ಲಿ ಪವರ್ ಪ್ರಾಜೆಕ್ಟ್ ನಡೆಸುತ್ತಿರುವ ತಲ್ವಾಂಡಿ ಸಾಬೋ ಪವರ್ ಲಿಮಿಟೆಡ್‌ಗೆ ಚೀನೀ ವೀಸಾಗಳನ್ನು ಮರುಬಳಕೆ ಮಾಡಲು ಅನುಮೋದನೆ ಕೊಡಿಸಲು ಕಾರ್ತಿ ತಮ್ಮ ಆಪ್ತ ಸಹಾಯಕ ಎಸ್ ಭಾಸ್ಕರರಾಮನ್ ಮೂಲಕ 50 ಲಕ್ಷ ರೂ. ತೆಗೆದುಕೊಂಡಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿರುವುದಾಗಿ ಇಡಿ ಹೇಳಿದೆ.

ಕಾರ್ತಿ ಅವರ ತಂದೆ ಪಿ ಚಿದಂಬರಂ ಅವರು ಗೃಹ ಸಚಿವರಾಗಿದ್ದಾಗ ಗೃಹ ಸಚಿವಾಲಯದಿಂದ ವೀಸಾಗಳ ಮರುಬಳಕೆಗೆ ಅನುಮೋದನೆ ಪಡೆಯಲು ಕಂಪನಿಯ ಅಧಿಕಾರಿಗಳು ಕಾರ್ತಿ ಅವರನ್ನು ಸಂಪರ್ಕಿಸಿದ್ದರು. ಆಗ, ಕಂಪನಿಯು ಕಾಲ್ಪನಿಕ ಸೇವೆಗಳ ಹೆಸರಿನಲ್ಲಿ ಎಂಟ್ರಿ ಆಪರೇಟರ್‌ಗೆ ಚೆಕ್ ಮೂಲಕ 50 ಲಕ್ಷ ರೂ.ಗಳನ್ನು ಭಾಸ್ಕರರಾಮನ್‌ ಮೂಲಕ ಕಾರ್ತಿ ಅವರಿಗೆ ಪಾವತಿಸಿದೆ ಎಂದು ಇಡಿ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X