ತಮ್ಮ ಆದೇಶವನ್ನು ಉಲ್ಲಂಘಿಸಿದ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ವಿರುದ್ಧ ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಬೆನ್ನಲ್ಲೆ ರಾಜ್ಯಪಾಲರು ಡಿಎಂಕೆ ನಾಯಕ ಕೆ ಪೊನ್ಮುಡಿ ಅವರನ್ನು ಸರ್ಕಾರದ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಿದ್ದಾರೆ.
ಪೊನ್ಮುಡಿ ಅವರು ಇಂದು ಮಧ್ಯಾಹ್ನ 3.30ಕ್ಕೆ ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪೊನ್ಮುಡಿ ಅವರನ್ನು ಸಂಪುಟ ಮರುಸೇರ್ಪಡೆ ವಿರೋಧ ವ್ಯಕ್ತಪಡಿಸಿದ ರಾಜ್ಯಪಾಲರ ನಡೆಯ ವಿರುದ್ಧ ನಿನ್ನೆ(ಮಾ.22) ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ
ಅಲ್ಲದೆ ವಿಷಯವನ್ನು 24 ಗಂಟೆಯೊಳಗೆ ಬಗೆಹರಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ನಿರ್ದೇಶನ ನೀಡಿತ್ತು.
ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಶಿಫಾರಸ್ಸಿನ ಹೊರತಾಗಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ಪೊನ್ಮುಡಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಕೋರ್ಟ್ ಆದೇಶವನ್ನು ಉಲ್ಲಂಘಿಸಿರುವುದನ್ನು ಗಮನಿಸಿ ರಾಜ್ಯಪಾಲರ ಸಾಂವಿಧಾನಿಕ ಹಕ್ಕನ್ನು ತಿರಸ್ಕರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.
