ಗದಗ | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

Date:

Advertisements

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್‌ 25ರಿಂದ ಎಪ್ರಿಲ್ 6ರವರೆಗೆ, ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಸುವುದಾಗಿ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 60 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್‌ 25ರಿಂದ ಎಪ್ರಿಲ್ 6 ರವರೆಗೆ  ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.

Advertisements

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು  ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನು  ನಿರ್ಬಂಧಿಸಲಾಗಿದೆ ಎಂದರು.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್ , ಫೋಟೋ ಕಾಪಿಯರ್‍ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್  ಮತ್ತು ಇತರೇ ಸಂಪರ್ಕ ಸಲಕರಣೆಗಳನು ತರುವುದನ್ನು ನಿಷೇಧಿಸಲಾಗಿದೆ ಎಂದರ ಅವರು,

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ವೈಶಾಲಿ ಎಂ.ಎಲ್ ಅವರು ಆದೇಶಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X