ದಕ್ಷಿಣ ಕನ್ನಡ | ಸೌಹಾರ್ದ ಕಾರ್ಯಕ್ರಮಗಳಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಬಶೀರ್ ಮದನಿ

Date:

Advertisements

ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ ಎಂದು ಎಸ್‌ವಾಯ್‌ಎಸ್‌ ಜಿಲ್ಲಾ ಉಪಾಧ್ಯಕ್ಷ ಬಶೀರ್‌ ಮದನಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಇಂತಹ ಕಂದಕ ಸೃಷ್ಟಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಸುನ್ನಿ ವಿದ್ವಾಂಸ ಹಾಗೂ ಎಸ್‌ಯುಎಸ್‌ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು.

Advertisements

ಸಿಎಸ್‌ಐ ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷ ಹೇಮಚಂದ್ರ ಕುಮಾರ್ ಮಾತನಾಡುತ್ತಾ, ಇಫ್ತಾರ್ ಕೂಟವು ನಿಜಕ್ಕೂ ಸೌಹಾರ್ದದ ಸಂದೇಶ ಸಾರುವ ಆಚರಣೆಯಾಗಿದೆ. ಮಾತ್ರವಲ್ಲ ಭಾಂಧವ್ಯದ ಸಂಕೇತವಾಗಿದೆ. ಒಬ್ಬರನ್ನೊಬ್ಬರನ್ನು ಪರಸ್ಪರ ಗೌರವಿಸಲು ಇಂತಹ ವೇದಿಕೆಗಳನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಹೇಳಿದರು.

ಸಾಮಾಜಿಕ ಚಿಂತಕ ಡಾ. ಕೆ.ಪ್ರಕಾಶ್‌ರವರು ಮಾತನಾಡಿ, ಜಗತ್ತಿನ 126ದೇಶಗಳ ಪೈಕಿ ಭಾರತದ ಹಸಿವಿನ ಸೂಚ್ಯಂಕವು 114ನೇ ಸ್ಥಾನದಲ್ಲಿದೆ. ದೇಶದಲ್ಲಿ ಹಸಿವಿನ ಹೆಚ್ಚಳದ ಜೊತೆಗೆ ಅಸಮಾನತೆಯೂ ಹೆಚ್ಚುತ್ತಿದೆ, ಸೌಹಾರ್ದತೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ನಾಸಿರ್ ಲಕ್ಕಿಸ್ಟಾರ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಅಲ್ವಾರೀಸ್, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಅಧ್ಯಕ್ಷ ಮಹಮ್ಮದ್ ಮುಸ್ತಾಫ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿಯವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X