‘ಬಿಗ್ ಬಾಸ್‌’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನ

Date:

Advertisements

ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಹಾಗೂ ಬಿಗ್‌ಬಾಸ್‌ ಕನ್ನಡ ಒಟಿಟಿಯ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರು ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಆರೋಪದ ಮೇಲೆ ಬ್ಯಾಡರ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗುರುವಾರ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ದೂರು ನೀಡಿದ್ದರು. ಅವರು ನೀಡಿದ ದೂರಿನ ಆಧಾರದ ಮೇರೆಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿ ಎಫ್​ಐಆರ್​ ದಾಖಲಾಗಿದೆ.

ಹೆಣ್ಣು ಮಗು ದತ್ತು ಪಡೆದಿರುವುದಾಗಿ ಸೋನು ಶ್ರೀನಿವಾಸ್ ಗೌಡ ಇತ್ತೀಚೆಗೆ ತಮ್ಮದೇ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು ಎಂಬ ಆರೋಪದ ಮೇಲೆ ಸದ್ಯ ಅವರನ್ನು ಬಂಧಿಸಲಾಗಿದೆ.

Advertisements

ಹಿಂದೂ ದತ್ತು ಕಾಯಿದೆ 1956ರ ಪ್ರಕಾರ ಈ ದತ್ತು ಪ್ರಕ್ರಿಯೆ ನಡೆದಿಲ್ಲ. ಮಗುವಿನ ಮನೆ ಇರುವ ರಾಯಚೂರಿಗೆ ಹೋಗಿ, ಅಲ್ಲಿಂದ ಮಗುವನ್ನು ಕರೆದುಕೊಂಡು ಸೋನು ಬಂದಿದ್ದಾರೆ. ಮಗುವಿನ ಪೋಷಕರಿಗೆ ಕೆಲ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ಸೋನು ಶ್ರೀನಿವಾಸ ಗೌಡ ಅವರೇ ಈ ಹಿಂದೆ ಹೇಳಿಕೊಂಡಿದ್ದಾರೆ. ಇದು ಮಗುವನ್ನು ಮಾರಾಟ ಮಾಡಿರುವಂತೆ ಕಾಣುತ್ತದೆ. ಅಲ್ಲದೆ, ಮಗುವಿನ ಘನತೆಯನ್ನು ಕಾಪಾಡುವಲ್ಲಿ ಸೋನು ವಿಫಲರಾಗಿದ್ದಾರೆ ಎಂಬ ದೂರಿನಲ್ಲಿ ತಿಳಿಸಲಾಗಿದೆ.

“ಎಂಟು ವರ್ಷದ ಮಗುವನ್ನು ರಾಯಚೂರಿನಲ್ಲಿ ದತ್ತು ಪಡೆದಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 234 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

“ಸರಿಯಾದ ದತ್ತು ಪ್ರಕ್ರಿಯೆಗಳನ್ನು ಅನುಸರಿಸಲಾಗಿಲ್ಲ ಮತ್ತು ಮಹಿಳೆಯು ಮಗುವಿನೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳನ್ನು ಪೋಸ್ಟ್ ಮಾಡುತ್ತಾಳೆ ಎಂದು ದೂರುದಾರರು ಹೇಳಿದ್ದಾರೆ. ಇದು ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಅಪರಾಧ ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಆಕೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸೋನುಗೌಡ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 1 ಮಿಲಿಯನ್ ಫಾಲೋವರ್ಸ್‌ ಹೊಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X