ಮಹದಾಯಿ ಹೋರಾಟಗಾರ ಕುತುಬುದ್ದೀನ್ ಖಾಜಿ ಬಂಧನದ ಹಿಂದೆ ಪ್ರಲ್ಹಾದ್ ಜೋಶಿ ಕೈವಾಡ: ಸೊಬರದಮಠ ಆರೋಪ

Date:

Advertisements

ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರ ಹಾಗೂ ರೈಲ್ವೆ ಹೋರಾಟ ಸಮಿತಿ‌ ಅಧ್ಯಕ್ಷ‌ ಬಾಗಲಕೋಟೆಯ ಕುತುಬುದ್ದೀನ್ ಖಾಜಿ ಅವರ ಬಂಧನ ಖಂಡಿಸಿ ಮಹದಾಯಿ ಹೋರಾಟ ಸಮಿತಿ‌ ಸದಸ್ಯರು ಶುಕ್ರವಾರ ಹುಬ್ಬಳ್ಳಿಯ ರಾಣಿ‌ ಚನ್ನಮ್ಮ‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕುತುಬುದ್ದೀನ್ ಖಾಜಿ ಅವರನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಮಹದಾಯಿ ಹೋರಾಟ ಸಮಿತಿ‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, “ಮಹದಾಯಿ ಯೋಜನೆ ಅನುಷ್ಠಾನಕ್ಕಿರುವ ಕಾನೂನು ತೊಡಕು ಬಗೆಹರಿಸಲಾಗದ‌ ರಾಜ್ಯ ಮತ್ತು ಕೇಂದ್ರ ಸರ್ಕಾರ, ಪ್ರತಿಭಟನೆಯನ್ನು ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

“ರೈತ ಹೋರಾಟಗಾರ ಕುತುಬುದ್ದೀನ್ ಖಾಜಿ ಅವರನ್ನು ಬಂಧಿಸಿ ಜೈಲಿಗೆ ಕಳಹಿಸಿರುವುದು ಅತ್ಯಂತ ಖಂಡನೀಯ. ಇದಕ್ಕೆಲ್ಲ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯೇ ಕಾರಣ” ಎಂದು ರೈತ ಸೇನಾ ಕರ್ನಾಟಕ‌ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ಆರೋಪಿಸಿದ್ದಾರೆ.

Advertisements

“ಕೇಂದ್ರ ಸಚಿವರಿಗೆ ಮಹದಾಯಿ ಯೋಜನೆ ಅನುಷ್ಠಾನ ಮಾಡುವ ಆಸಕ್ತಿಗಿಂತ ಹೆಚ್ಚಾಗಿ, ರೈತರನ್ನು ಜೈಲಿಗೆ ಕಳುಹಿಸುವುದರಲ್ಲಿ ಹೆಚ್ಚು ಆಸಕ್ತಿ ಇದ್ದಂತಿದೆ” ಎಂದು ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರಕಟಣೆಯಲ್ಲಿ ಆಕ್ರೋಶ‌ ಹೊರಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕರ್ನಾಟಕ | 2.5 ಲಕ್ಷ ಮಂದಿ ವಲಸೆ ಮತದಾರರ ಸಂಪರ್ಕಕ್ಕೆ ಮುಂದಾದ ಚುನಾವಣಾ ಆಯೋಗ

“ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ 2016ರಲ್ಲಿ ಸಾಂಕೇತಿಕವಾಗಿ ಹುಬ್ಬಳ್ಳಿಯಲ್ಲಿ ರೈಲು ರೋಖೋ ಚಳವಳಿ ಮಾಡಲಾಗಿತ್ತು. ಆದರೆ, ರೈಲ್ವೆ ಪೊಲೀಸರು ಏಳು, ಎಂಟು ತಾಸು ರೈಲು‌ ಸಂಚಾರ ತಡೆದಿದ್ದಾರೆ ಎಂದು ಸುಳ್ಳು‌ ಪ್ರಕರಣ ದಾಖಲಿಸಿದ್ದರು. ಅದಕ್ಕೆ ಪೂರಕವಾಗಿ ಯಾವ ನೋಟಿಸ್, ವಾರಂಟ್ ಸಹ ನೀಡಿರಲಿಲ್ಲ. ಗುರುವಾರ ಏಕಾಏಕಿ ಕುತುಬುದ್ದೀನ್ ಖಾಜಿ ಅವರನ್ನು ಆರ್.ಪಿ.ಎಫ್. ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿ, ಹುಬ್ಬಳ್ಳಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಈ ನಡೆ ಖಂಡನೀಯವಾಗಿದೆ” ಎಂದು ಸಿದ್ದು ತೇಜಿ ಹೇಳಿದ್ದಾರೆ.

“ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದು, ಬಂಧನವಾಗಿರುವ ಅಮಾಯಕ ರೈತರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತ ಹೋರಾಟಗಾರರು ಮತ್ತು ಸಮಿತಿಗಳ ಸದಸ್ಯರು ಚುನಾವಣಾ ಪ್ರಚಾರಕ್ಕೆ ಬಂದಾಗ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X