ಗದಗ | ಕೂಲಿಕಾರರ ಜತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ: ಪಿಡಿಒ ಶಿಲ್ಪಾ ಕವಲೂರ

Date:

Advertisements

ಮನರೇಗಾ ಯೋಜನೆಯು ಬೇಸಿಗೆ ದಿನಗಳಲ್ಲಿ ದುಡಿಯುವ ಕೈಗಳಿಗೆ ಶಕ್ತಿ ತುಂಬಲು ನೆರವಾಗುತ್ತದೆ. ಹೀಗಾಗಿ ನಿಮ್ಮ ತಂಡದ ಸಂಪೂರ್ಣ ಜವಾಬ್ದಾರಿ ನೀವು ತೆಗೆದುಕೊಂಡು ಅವರ ಕೆಲಸ ತೆಗೆದುಕೊಳ್ಳವುದು ಹಾಗೂ ಅವರಿಗೆ ಸಂಪೂರ್ಣ ವೇತನ ಪಾವತಿಯಾಗುವವರೆಗೂ ಜವಾಬ್ದಾರಿ ಆಗಿರುತ್ತೀರಿ ಎಂದು ಕಾಯಕ ಬಂಧುಗಳಿಗೆ ಕುರುಡಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಕವಲೂರ ಹೇಳಿದರು.

ಗದಗ ಜಿಲ್ಲೆ ರೋಣ ತಾಲೂಕಿನ ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಹಮ್ಮಿಕೊಂಡಿದ್ದ ʼವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿʼ ಅಭಿಯಾನ ಹಾಗೂ ಕಾಯಕ ಬಂಧುಗಳ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬೇಸಿಗೆ ದಿನಗಳಲ್ಲಿ ನಮ್ಮ ಭಾಗದಲ್ಲಿ ಕೆಲಸ ಕಡಿಮೆ ಇರುತ್ತದೆ. ಆ ಸಂದರ್ಭದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುತ್ತದೆ. ಏಪ್ರಿಲ್ 1 ರಿಂದ ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ ಸಾಮೂಹಿಕ ಕಾಮಗಾರಿ ಪ್ರಾರಂಭ ಮಾಡಲಾಗುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಖಾತ್ರಿಯ ಸಮುದಾಯ ಕೆಲಸಗಳಲ್ಲಿ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.

Advertisements

ಎನ್ಎಂಎಂಎಸ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಕಾಯಕ ಬಂಧುಗಳು ಎನ್ಎಂಎಂಎಸ್ ಆ್ಯಪ್‌ನ ಮೂಲಕ ಹಾಜರಾತಿ ಹಾಕಿ, ಕೆಲಸದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

“ತಮ್ಮ ಕೂಲಿಕಾರರ ಆಧಾರ ಸಂಖ್ಯೆಗೆ ಬ್ಯಾಂಕ್ ಖಾತೆ ಸಂಖ್ಯೆ ಲಿಂಕ್ ಹಾಗೂ ಉದ್ಯೋಗ ಚೀಟಿ(ಎನ್‌ಸಿಪಿಐ) ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆಯನ್ನು ಗ್ರಾಮ ಪಂಚಾಯತಿಯಿಂದ ಮಾಡಲಾಗುತ್ತದೆ” ಎಂದರು.

“ಕೆಲಸದ ಸ್ಥಳಕ್ಕೆ ಮಕ್ಕಳನ್ನು ಕರೆತರಬಾರದು. ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿಯಿಂದ ಕೂಸಿನ ಮನೆ ಆರಂಭ ಮಾಡಿದ್ದು, ತಾವುಗಳು ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಲೋಕಸಭಾ ಕ್ಷೇತ್ರ | ಗಣಿ ನಾಡಿನಲ್ಲಿ ಯಾರ ಕೊರಳಿಗೆ ಈ ಬಾರಿ ವಿಜಯದ ಹಾರ?

ಐಇಸಿ ಸಂಯೋಜಕ ಮಂಜುನಾಥ ಮಾತನಾಡಿ, “ಕೆಲಸದ ಸ್ಥಳದಲ್ಲಿ ಕೂಲಿಕಾರರ ಹಾಜರಾತಿಯನ್ನು ಎರಡು ಹಂತದಲ್ಲಿ ಎನ್‌ಎಂಎಂಎಸ್‌ ಆ್ಯಪ್‌ನಲ್ಲಿ ಸೆರೆ ಹಿಡಿಯಬೇಕು. ಕೂಲಿಕಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಹಾಯಕ ಗುರುಲಿಂಗಯ್ಯ ಹಿರೇಮಠ, ಬಿಎಫ್‌ಟಿ, ಪ್ರಕಾಶ ಅಂಬಕ್ಕಿ, ಜಿಕೆಎಂ ಯಶೋಧಾ ಅಮರಗೋಳ ಹಾಗೂ ಕಾಯಕ ಬಂಧುಗಳು, ಸ್ವಸಹಾಯ ಸಂಘದ ಸದಸ್ಯರು, ಮತ್ತು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X