ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕುರ್ತಕೋಟಿ ಗ್ರಾಮದ ಸಾರ್ವಜನಿಕರಿಗೆ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದರು.
ಲೋಕಸಭಾ ಚುನಾವಣೆ-2024ರ ಅಂಗವಾಗಿ ಶುಕ್ರವಾರ ಮತದಾನ ಜಾಗೃತಿಗಾಗಿ ಗದಗ ತಾಲೂಕು ಸ್ವೀಪ್ ಸಮಿತಿ ಹಾಗೂ ನೀರಲಗಿ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
“18 ವರ್ಷ ತುಂಬುವ ಯುವ ಮತದಾರರು ವೋಟರ್ ಹೆಲ್ಪ್‌ಲೈನ್ ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಬಹುದು” ಎಂದು ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಕೂಲಿಕಾರರ ಜತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ: ಪಿಡಿಒ ಶಿಲ್ಪಾ ಕವಲೂರ
ಪಿಡಿಒ ಮಾತನಾಡಿ, “ಗ್ರಾಮ ಪಂಚಾಯಿತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಬೇಕಾದರೆ ಗ್ರಾಮದ ಎಲ್ಲ ಮತದಾರರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಅಂದರೆ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಬೇಕು” ಎಂದು ಕರೆ ನೀಡಿದರು.
