‘ನುಡಿದಂತೆ ನಡೆದ ಸರ್ಕಾರ’ ಎಂಬುದೇ ಸಿದ್ದರಾಮಯ್ಯ ಅವರ ಮೊದಲ ಸುಳ್ಳು: ಆರ್‌ ಅಶೋಕ್‌ ಕಿಡಿ

Date:

Advertisements

ಸಿಎಂ ಸಿದ್ದರಾಮಯ್ಯ ನವರೇ, ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “2013-18ರಲ್ಲಿ ತಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೆರಿಸಿದ್ದು ಕೇವಲ 38%, ಅಂದರೆ 67 ಮಾತ್ರ” ಎಂದಿದ್ದಾರೆ.

“ಇನ್ನು ಕಳೆದ 10 ತಿಂಗಳುಗಳಲ್ಲಿ ತಮ್ಮ ಸಾಧನೆ ದೊಡ್ಡ ಶೂನ್ಯ. ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ರಾಜ್ಯವನ್ನ 1 ಲಕ್ಷ ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ನಿಮ್ಮ ಸಾಧನೆ. ಕೊರೋನಾದಂತಹ ಪರಿಸ್ಥಿತಿಯಲ್ಲೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಸ್ಥಾನದಲ್ಲಿದ್ದ ಕರ್ನಾಟಕವನ್ನ 4ನೇ ಸ್ಥಾನಕ್ಕೆ ಇಳಿಸಿದ್ದೇ ನಿಮ್ಮ ಸಾಧನೆ” ಎಂದು ಟೀಕಿಸಿದ್ದಾರೆ.

Advertisements

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಿರಬೇಕಾಗಿದ್ದ 11,000 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳ ಹೆಸರಿನಲ್ಲಿ ಗುಳುಂ ಮಾಡಿದ್ದೇ ನಿಮ್ಮ ಸಾಧನೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲು, ಬೆಂಗಳೂರಲ್ಲಿ ಬಾಂಬ್ ಸ್ಫೋಟ ಆಗಲು ಬಿಟ್ಟಿದ್ದೇ ನಿಮ್ಮ ಸಾಧನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಮ್ಮ ʼಭ್ರಷ್ಟಾಚಾರ ಮುಕ್ತ ಭಾರತʼದಲ್ಲಿ ಬಿಜೆಪಿ ಇಲ್ಲವೇ ಮೋದಿಜಿ?

“ರೈತರಿಗೆ ಬರ ಪರಿಹಾರ ಕೊಡದೆ 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ತಂದಿದ್ದು, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೆ ಹೋಗುವಂತೆ ಮಾಡಿದ್ದೇ ನಿಮ್ಮ ಸಾಧನೆ. ಬೆಂಗಳೂರಿನ ಜನರು ಕುಡಿಯುವ ನೀರಿಗೂ ಪರದಾಡುವ ದುಸ್ಥಿತಿ ತಂದು ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಜನ ಬೆಂಗಳೂರು ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ನಿಮ್ಮ ಸಾಧನೆ” ಎಂದು ಕುಟುಕಿದ್ದಾರೆ.

“ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳು ಓದಲು ಕರೆಂಟ್ ಇಲ್ಲದೆ, ಪರೀಕ್ಷಾ ಕೇಂದ್ರಕ್ಕೆ ಹೋಗಲು ಬಸ್ಸಿಲ್ಲದೆ ಪರದಾಡುವ ಪರಿಸ್ಥಿತಿ ತಂದಿದ್ದೇ ನಿಮ್ಮ ಸಾಧನೆ. ನೀರು, ಹಾಲು, ಕರೆಂಟು, ಆಸ್ತಿ ತೆರಿಗೆ, ಆಸ್ತಿ ನೋಂದಣಿ ಶುಲ್ಕ, ಸ್ಟಾಂಪ್ ದರ, ಕಡೆಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನೂ ಹೆಚ್ಚಿಸಿ ಜನರನ್ನು ಸುಲಿಗೆ ಮಾಡಿದ್ದೇ ನಿಮ್ಮ ಸಾಧನೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು” ಎಂದು ಲೇವಡಿ ಮಾಡಿದ್ದಾರೆ.

“ಇಷ್ಟೆಲ್ಲಾ ಸಾಲು ಸಾಲು ವೈಫಲ್ಯಗಳ ನಡುವೆಯೂ ಅದ್ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತ ಕೇಳುತ್ತಿದ್ದೀರೋ ನಾ ಕಾಣೆ. ಕೇವಲ ಹತ್ತು ತಿಂಗಳಲ್ಲಿ ಜನಮನ್ನಣೆ ಕಳೆದುಕೊಂಡಿರುವ ನಿಮ್ಮ ಕಾಂಗ್ರೆಸ್‌ ಸರ್ಕಾರಕ್ಕೆ ಜನ ದಿನನಿತ್ಯ ಶಾಪ ಹಾಕುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಕನ್ನಡಿಗರು ಕಾತುರದಿಂದ ಕಾಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X