ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ ದಾನವಾಗಿದೆ. ಹದಿನೆಂಟರಿಂದ ಅರವತ್ತು ವರ್ಷದೊಳಗಿನ ನಲ್ವತ್ತೈದು ಕೆಜಿ ತೂಕದ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು. ರಕ್ತದಾನದಿಂದ ಮೂರು ಜೀವಗಳನ್ನು ರಕ್ಷಿಸಬಹುದು. ಈ ಕಾರ್ಯವು ಮಾನವೀಯತೆಯ ಸಂಕೇತವಾಗಿದೆ ಎಂದು ಆರೋಗ್ಯ ಅಧಿಕಾರಿ ಮಮತಾ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕಲಬುರಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕ, ಐಕ್ಯೂಎಸಿ, ತಾಲೂಕು ಸರ್ಕಾರಿ ಆಸ್ಪತ್ರೆ, ಎಐಡಿಎಸ್ಒ ಕಲಬುರಗಿ ಜಿಲ್ಲಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಶಹೀದ್ ಭಗತ್ ಸಿಂಗ್ ಅವರ ಹುತಾತ್ಮ ದಿನಾಚರಣೆ ಅಂಗವಾಗಿ ಕಾಲೇಜಿನ ಡಾ. ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್ ಅಳವಡಿಕೆ
ಕಾಲೇಜಿನ ಪ್ರಾಂಶುಪಾಲ ಡಾ. ಕರಿಗೊಳೇಶ್ವರ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ. ಖುತೇಜಾ ನಸ್ರೀನ್, ಸಿಬ್ಬಂದಿ ಕಾರ್ಯದರ್ಶಿ ಡಾ. ಲಕ್ಷ್ಮಣ ಬೋಸ್ಲೆ, ಡಾ. ಶರಣಪ್ಪ ಸೈದಾಪೂರ, ಡಾ.ವಿನೋದ ಕುಮಾರ, ಡಾ.ಗಿರೀಶ ರಾಥೋಡ್, ಡಾ.ನಾಗರಡ್ಡಿ, ಡಾ.ಖಾಜಾವಲಿ ಈಚನಾಳ, ಡಾ.ಶರಣಪ್ಪ ಗುಂಡುಗುರ್ತಿ, ಭೀಮಣ್ಣ ಸೇರಿದಂತೆ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷೆ ಸ್ನೇಹಾ ಕಟ್ಟಿಮನಿ ಇದ್ದರು.
