ಚುನಾವಣಾ ಬಾಂಡ್ | ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಂಧನಕ್ಕೆ ಎಎಪಿ ಅಗ್ರಹ

Date:

Advertisements

ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ, ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು. ಅವರ ಹಣ ಪಡೆದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದತೆ, ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನೇಕ ಇಡಿ ದಾಳಿಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆ ಹೊರತಾಗಿಯೂ ಯಾವುದೇ ಎಎಪಿ ನಾಯಕರ ಬಳಿಯಾಗಲಿ, ಕಾರ್ಯಕರ್ತರ ಬಳಿಯಾಗಲಿ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ತಪ್ಪಿತಸ್ಥರು ಎನ್ನಲು ಅವರ ಬಳಿ ಪುರಾವೆಗಳೂ ಇಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಸುಳ್ಳಾಗಿ ಬಿಂಬಿಸಿ ಎದುರಾಳಿಯಾಗಿ ನಿಂತಿರುವ ಕೇಜ್ರಿವಾಲ್ ಅವರನ್ನು ಹತ್ತಿಕ್ಕುವ ಪ್ರಯತ್ನವನ್ನು ನರೇಂದ್ರ ಮೋದಿ ನಡೆಸುತ್ತಿದ್ದಾರೆ” ಎಂದರು.

“ಶರತ್ ಚಂದ್ರ ರೆಡ್ಡಿ ಅವರಿಗೆ 2022ರ ನವೆಂಬರ್ 9ರಂದು ಸಮನ್ಸ್ ನೀಡಲಾಯಿತು. ವಿಚಾರಣೆ ವೇಳೆ ಅವರು, ತಾವು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ ಅಥವಾ ಮಾತನಾಡಿಲ್ಲ ಮತ್ತು ಎಎಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಅದಾದ ಮರುದಿನವೇ ಇಡಿ ಅವರನ್ನು ಬಂಧಿಸಿತು. ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳುವಂತೆ ಹೆದರಿಸಿತು. ಚುನಾವಣೆ ಬಾಂಡ್ ಹೆಸರಲ್ಲಿ ದೇಣಿಗೆ ಕೊಡುವಂತೆಯೂ ಬೆದರಿಸಿತು” ಎಂದು ಹೇಳಿದರು.

Advertisements

“ಈವರೆಗೂ ಜೈಲಿನಲ್ಲಿದ್ದ ರೆಡ್ಡಿ ಅವರು ಇದೀಗ ತಮ್ಮ ಹೇಳಿಕೆ ಬದಲಾಯಿಸಿಕೊಂಡರು. ತಮ್ಮ ಫಾರ್ಮಾ ಕಂಪನಿ ಮೂಲಕ ಕೋಟಿ ಕೋಟಿ ದೇಣಿಗೆ ನೀಡಿದರು. ನಂತರ ಅಬಕಾರಿ ನೀತಿ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ ಎಂದರು. ಅವರು ಹಾಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ತಕ್ಷಣವೇ ಬೆನ್ನು ನೋವಿನ ನೆಪದಲ್ಲಿ ಅವರಿಗೆ ಜಾಮೀನು ಕೊಡಲಾಗಿದೆ. ಪ್ರಮುಖ ಆರೋಪಿಯೊಬ್ಬರಿಗೆ ಬೆನ್ನು ನೋವಿನ ಕಾರಣಕ್ಕೆ ಜಾಮೀನು ನೀಡಿದ ಬೇರೆ ಉದಾಹರಣೆ ಇದೆಯೇ? ಏನೂ ತಪ್ಪೆಸಗದ ನಮ್ಮ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿ ಇರಿಸಿಕೊಳ್ಳಲಾಗಿದೆ. ಇದು ಕುತಂತ್ರ ರಾಜಕಾರಣವಲ್ಲದೆ ಬೇರೇನು?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

“ಹೈದರಾಬಾದ್ ಮೂಲದ ಉದ್ಯಮಿ ಪಿ.ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. 2022ರ ನವೆಂಬರ್ 10ರಂದು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತು. ಬಳಿಕ ನವೆಂಬರ್ 15ರಂದು ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿ ₹5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ನೀಡಿದೆ. ನವೆಂಬರ್ 21ರಂದು ಅವುಗಳನ್ನು ಬಿಜೆಪಿ ನಗದಾಗಿ ಪರಿವರ್ತಿಸಿಕೊಂಡಿದೆ” ಎಂದು ತಿಳಿಸಿದರು.

“ಅರಬಿಂದೋ ಫಾರ್ಮಾ ಒಟ್ಟು ₹52 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, ಅದರಲ್ಲಿ ₹34.5 ಕೋಟಿ ಬಿಜೆಪಿ ಪಾಲಾಗಿದೆ. ಭಾರತ್ ರಾಷ್ಟ್ರ ಸಮಿತಿಗೆ ₹15 ಕೋಟಿ ಹಾಗೂ ತೆಲುಗು ದೇಶಂ ಪಕ್ಷಕ್ಕೆ ₹2.5 ಕೋಟಿ ದೇಣಿಗೆ ನೀಡಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X