ಕಲಬುರಗಿ | ಭಗತ್ ಸಿಂಗ್ ಅವರ 94ನೇ ಹುತಾತ್ಮ ದಿನಾಚರಣೆ; ಪಂಜಿನ ಮೆರವಣಿಗೆ

Date:

Advertisements

ಸಮಾಜವಾದಿ ಭಾರತ ನಿರ್ಮಾಣ ಮಾಡುವುದು ಶಹೀದ್ ಭಗತ್ ಸಿಂಗ್ ಅವರ ಕನಸಾಗಿತ್ತು ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ್ ಎಸ್ ಎಚ್ ಹೇಳಿದರು

ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಸೇಷನ್ ಕಲಬುರಗಿ ಜಿಲ್ಲಾ ಸಮಿತಿಯಿಂದ ಮಾರ್ಚ್‌ 23ರ ಸಾಯಂಕಾಲ ನಗರದಲ್ಲಿ ಹಮ್ಮಿಕೊಂಡಿದ್ದ ಶಹೀದ್ ಭಗತ್ ಸಿಂಗ್ ಅವರ 94ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರಾಗಿ ಮಾತನಾಡಿದರು.

“ಬ್ರಿಟಿಷರ ಒಡೆದಾಳುವ ನೀತಿಯನ್ನು ಗುರುತಿಸಿ, ʼನಾವು ಜಾತಿ ಧರ್ಮವೆಂದು ಬಡಿದಾಡದೆ ಬ್ರಿಟಿಷರ ವಿರುದ್ಧ ಒಂದಾಗಿ ಹೋರಾಡಬೇಕೆಂದಿದ್ದರು. ಹಾಗೂ ಸ್ವಾತಂತ್ರ್ಯ ಪಡೆಯುವುದು ಮಾತ್ರವೇ ನಮ್ಮ ಉದ್ದೇಶವಲ್ಲ, ಅದು ಮೊದಲ ಹೆಜ್ಜೆ ಮಾತ್ರ. ನಮ್ಮ ಗುರಿಯಿರುವುದು ಒಂದು ಉನ್ನತವಾದ ರಾಷ್ಟ್ರವನ್ನು ನಿರ್ಮಾಣ ಮಾಡುವುದುʼ ಎಂದಿದ್ದರು. ಯಾವ ರಾಷ್ಟ್ರ ತನ್ನೆಲ್ಲ ಜನರಿಗೆ ಸಮಾನವಾಗಿ ಬದುಕುವ ಹಕ್ಕನ್ನು ನೀಡುತ್ತದೆಯೋ, ಯಾವ ರಾಷ್ಟ್ರ ಧರ್ಮದ ಹೆಸರಲ್ಲಿ ಜನರನ್ನು ಒಡೆಯುವುದಿಲ್ಲವೋ, ಯಾವ ರಾಷ್ಟ್ರ ಮನುಷ್ಯನಿಂದ ಮನುಷ್ಯನ ಶೋಷಣೆಯನ್ನು ಕೊನೆಗಾಣಿಸುವುದೋ, ಅಂತಹ ಸಮಾಜವಾದಿ ಭಾರತ ನಿರ್ಮಾಣದ ಕನಸಾಗಿತ್ತು” ಎಂದರು.

Advertisements

“ಭಗತ್‌ ಬಹಳ ಸಣ್ಣ ವಯಸ್ಸಿನಲ್ಲಿ ಅಪಾರವಾದ ಜ್ಞಾನವನ್ನು ಗಳಿಸಿದ್ದರು. ಅವರ ಇಡೀ ಜೀವನ ಯುವಜನರಿಗೆ ಮಾದರಿಯಾಗಿದೆ. ಇಂದಿನ ಬೆಲೆ ಏರಿಕೆ, ನಿರುದ್ಯೋಗ, ಬಡತನ ಎಲ್ಲ ಸಮಸ್ಯೆಗಳಿಗೆ ಭಗತ್ ಸಿಂಗ್ ಅವರ ವಿಚಾರ ಬಹಳ ಅವಶ್ಯವಾಗಿದ್ದು, ಈ ವಿಚಾರವನ್ನು ಯುವ ಜನರು ತಿಳಿದುಕೊಂಡು ಸಂಘಟಿತ ಆಂದೋಲನ ಕಟ್ಟಿ ಸಮಾಜವಾದಿ ಭಾರತ ನಿರ್ಮಿಸಲು ಮುಂದೆ ಬರಬೇಕು” ಎಂದು ಕರೆ ನೀಡಿದರು.

ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಮೇಶ್ ದೇವಕರ್ ಪ್ರಸ್ತಾವಿಕವಾಗಿ ಮಾತನಾಡಿ, “ಸರ್ಕಾರವು ಭಗತ್ ಸಿಂಗ್ ಅವರ ಇತಿಹಾಸವನ್ನು ಕಡೆಗಣಿಸುತ್ತಿದ್ದು, ಸರ್ಕಾರವು ಕೂಡಲೇ ಭಗತ್‌ ಸಿಂಗ್‌ ಅವರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಸೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ವಾತಂತ್ರ್ಯವೀರ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ಕಾರ್ಯಕ್ರಮಕ್ಕೂ ಮುನ್ನ ಪಂಜಿನ ಮೆರವಣಿಗೆಯು ರೈಲು ನಿಲ್ದಾಣ ಎದುರುಗಡೆ ಪ್ರಾರಂಭವಾಗಿ ತಿಮ್ಮಾಪೂರಗೆ ಚೌಕ್ ವರೆಗೆ ಘೋಷಗಳು ಕೂಗುತ್ತಾ ಆಗಮಿಸಿ ಸಮಾರೋಪಗೊಂಡಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಿದ್ದು ಚೌದರಿ, ಕಾರ್ಯದರ್ಶಿ ಈಶ್ವರ್ ಕೆ, ಎಐಡಿವೈಒ ಜಿಲ್ಲಾ ಸಮಿತಿ ಸದಸ್ಯರು ಸೇರಿದಂತೆ ಇತರ ಯುವಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X