ದಾವಣಗೆರೆ | ಜಿ.ಎಂ. ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್; ಬಿಜೆಪಿ ರೆಬೆಲ್ ತಂಡಕ್ಕೆ ತೀವ್ರ ಅಸಮಾಧಾನ

Date:

Advertisements

ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಮತ್ತವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಕಳೆದ 8-10 ತಿಂಗಳಿನಿಂದ ಅಸಮಾಧಾನ ವ್ಯಕ್ತಪಡಿಸಿ, ಬಿಗಿಪಟ್ಟು ಹಿಡಿದಿದ್ದ ದಾವಣಗೆರೆ ಬಿಜೆಪಿಯ ರೆಬೆಲ್ ತಂಡ, ತನ್ನ ಬಿಗಿ ಪೆಟ್ಟಿನಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿಲ್ಲ.

ದಾವಣಗೆರೆಗೆ ಹೊಸ ಅಭ್ಯರ್ಥಿ ಘೋಷಣೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ, ಕೊನೆಗೆ ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ಕೊಡಿಸಿದ್ದರ ಬಗ್ಗೆ ಜಿಲ್ಲಾ ಕಾರ್ಯಕರ್ತರ ಆದಿಯಾಗಿ ರೆಬೆಲ್ ತಂಡಕ್ಕೆ ತೀವ್ರ ಅಸಮಾಧಾನ ಉಂಟಾಗಿದೆ.

ನಿಗದಿಯಂತೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನಿವಾಸದಲ್ಲಿ ಭಾನುವಾರ ಸಂಜೆ ನಡೆದ ದಾವಣಗೆರೆ ಉತ್ತರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಜಿ.ಎಂ. ಸಿದ್ದೇಶ್ವರರ ವಿರುದ್ಧ ಬಹಳಷ್ಟು ವಿರೋಧ ವ್ಯಕ್ತವಾಗಿದೆ. ಯಡಿಯೂರಪ್ಪ ಅವರೇ ಖುದ್ದಾಗಿ ದಾವಣಗೆರೆಗೆ ಬರುವುದಾಗಿ‌ ತಿಳಿಸಿದ್ದು, ಬಿಎಸ್‌ವೈ ಬಂದು ನಮ್ಮ ಬೇಡಿಕೆ ಕೇಳಿ, ಅಭ್ಯರ್ಥಿ ಬದಲು ಮಾಡುವವರೆಗೂ ನಮ್ಮ ಬಿಗಿ ಪಟ್ಟು ಸಡಿಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

Advertisements

ಇದುವರೆಗೂ ಕಣದಲ್ಲಿ ರವೀಂದ್ರನಾಥ್ ಮತ್ತು ರೇಣುಕಾಚಾರ್ಯ ಬಣದ ರೆಬೆಲ್ ಟೀಮ್ ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ಕೆಲವು ಕಾರ್ಯಕರ್ತರು ಕೂಡ ಬಂಡಾಯಕ್ಕೆ ದನಿಗೂಡಿಸಿ ಸಿದ್ದೇಶ್ವರ ಕುಟುಂಬದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.

ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು. ಆದರೆ, ದಾವಣಗೆರೆ ಬಿಜೆಪಿಯನ್ನು‌ ಜಿ.ಎಂ.ಸಿದ್ದೇಶ್ವರ್ ಕುಟುಂಬದ ಹಿಡಿತದಿಂದ ಬಿಡಿಸಿಯೇ ಸಿದ್ಧ ಎಂದು ಬಿಜೆಪಿ ರೆಬೆಲ್ ಟೀಂ ರಣಕೇಕೆ ಹಾಕಿದೆ.

ದಾವಣಗೆರೆ ಜಿಲ್ಲಾದ್ಯಂತ ಮೂಡಿದ್ದ ಜಿ.ಎಂ. ವಿರೋಧಿ ಕೂಗನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್‌ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿದೆ. ಇದರಿಂದಾಗಿ ಮತ್ತಷ್ಟು ಆಕ್ರೋಶಗೊಂಡಿರುವ ದಾವಣಗೆರೆ ರೆಬೆಲ್ ಟೀಂ, ಅಭ್ಯರ್ಥಿ ಬದಲಿಗೆ ಪಟ್ಟು ಹಿಡಿದಿದೆ.

‘ನಮ್ಮನ್ನು ಎದುರು ಹಾಕಿಕೊಂಡು ಮುಂದಿನ ಚುನಾವಣೆ ಹೇಗೆ ಗೆಲ್ತೀರ ನೋಡೋಣ’ ಎಂಬರ್ಥದಲ್ಲಿ ಜಿ.ಎಂ. ಸಿದ್ದೇಶ್ವರ ಅವರು ನಮ್ಮ ಗುಂಪಿನ ಸದಸ್ಯರಿಗೆ ಸವಾಲು ಹಾಕಿದ್ದಾರೆ. ನಮಗೇ ಹೀಗಾದರೆ ಸಾಮಾನ್ಯ ಕಾರ್ಯಕರ್ತರ ಪಾಡೇನು, ಬಿಜೆಪಿ ಬಗ್ಗೆ ಯಾವ ಭಾವನೆ ಮೂಡಬಹುದು ಎನ್ನುವುದನ್ನು ಯೋಚಿಸಬೇಕು  ಎಂದು ದಾವಣಗೆರೆ ದಕ್ಷಿಣ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ ಬಿ‌.ಜೆ. ಅಜಯ್ ಕುಮಾರ್ ಬೇಸರ ಹೊರಹಾಕಿದ್ದಾರೆ.

ಜಿ.ಎಂ. ಸಿದ್ದೇಶ್ವರ ಮತ್ತವರ ಕುಟುಂಬ ರಾಜಕಾರಣದ ವಿರುದ್ಧ ಒಗ್ಗಟ್ಟಾಗಿರುವ 11 ಜನರ ತಂಡಕ್ಕೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರೇ ನೇತೃತ್ವ ವಹಿಸಿದ್ದು, ಇವರೊಂದಿಗೆ ಮಾಜಿ ಸಚಿವರಾದ ಜಿ. ಕರುಣಾಕರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಎಂ. ಬಸವರಾಜ್ ನಾಯ್ಕ್, ಮಾಜಿ ಎಂಎಲ್‌ಸಿ ಶಿವಯೋಗಿಸ್ವಾಮಿ, ಯುವ ನಾಯಕರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ್, ಡಾ. ಟಿ.ಜಿ.ರವಿಕುಮಾರ್, ಸೋಮೇಶ್ವರ ಸುರೇಶ್, ಎಲ್. ಎನ್.ಕಲ್ಲಪ್ಪ ಅವರ ಈ ಎಲ್ಲರ ತೀವ್ರ ವಿರೋಧವು ಜಿ.ಎಂ. ಸಿದ್ದೇಶ್ವರ ಪಾಳಯಕ್ಕೆ ಹೆದರಿಕೆ ಹುಟ್ಟಿಸಿದೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

Download Eedina App Android / iOS

X