ಕೆರೆಗಳಿಗೆ ಬಿಡುತ್ತಿರುವ ಸಂಸ್ಕರಿಸಿದ ನೀರನ್ನು ಬಳಸಬೇಡಿ: ಬೆಂಗಳೂರು ಜನತೆಗೆ ಜಲಮಂಡಳಿ ಸೂಚನೆ

Date:

Advertisements

ಅಂತರ್ಜಲ ವೃದ್ಧಿಸುವ ಸಲುವಾಗಿ ಬೆಂಗಳೂರು ನಗರದಲ್ಲಿ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿದೆ. ಈ ಕೆರೆಗಳ ನೀರನ್ನು ಕುಡಿಯಲು, ಗೃಹ ಬಳಕೆಗೆ ಬಳಸಬಾರದು ಎಂದು ಜಲಮಂಡಳಿ ತಿಳಿಸಿದೆ.

ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ ಸಂಸ್ಕರಿಸಿ, ನಗರದ ಅಂತರ್ಜಲ ವೃದ್ಧಿಯ ದೃಷ್ಟಿಯಿಂದ ಕೆರೆಗಳಿಗೆ ತುಂಬಿಸಲಾಗುತ್ತಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಟ್ಟುನಿಟ್ಟಿನ ಮಾನದಂಡಗಳ ಆಧಾರದ ಮೇಲೆ ನೀರು ಸಂಸ್ಕರಿಸಲಾಗುತ್ತಿದೆ. ಈ ನೀರನ್ನು ನೇರವಾಗಿ ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕೆರೆಯ ನೀರನ್ನು ಬಳಸಬಾರದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ಪ್ರಸಾದ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

Advertisements

‘ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರನ್ನು ಹರಿಸುವ ಮೂಲಕ ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಿಸಲು ಜಲಮಂಡಳಿ ಮುಂದಾಗಿದೆ. ಬೆಂಗಳೂರು ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲ ಬಳಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣ ಮಾಡಬೇಕಿದೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮಗಳನ್ನು ಜಲಮಂಡಳಿ ಕೈಗೊಳ್ಳುತ್ತಿದೆ’ ಎಂದು ಹೇಳಿದ್ದಾರೆ.

ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್‌ಟಿಪಿ ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ಕೆಂಗೇರಿ ಕೆರೆಗೆ ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಂಡಳಿ ವತಿಯಿಂದ ಸಂಸ್ಕರಿಸಿ ನೀರನ್ನು ದುಬಾಸಿಪಾಳ್ಯ, ಹೊಸಕೆರೆಹಳ್ಳಿ ಹಾಗೂ ಹಲಗೇವಡೆರಹಳ್ಳಿ ಕೆರೆಗಳಿಗೆ ತುಂಬಿಸಲಾಗುವುದು ಎಂದು ರಾಮ್‌ಪ್ರಸಾದ್ ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X