ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಎಲ್ಲ ಎಎಪಿ ಸಂಸದರು ಮತ್ತು ಪದಾಧಿಕಾರಿಗಳು ಇಂದು ಎಎಪಿಯ ದೆಹಲಿಯಲ್ಲಿರುವ ಪ್ರಧಾನ ಕಚೇರಿ ಬಳಿ ಸೇರಲಿದ್ದು, ಅಲ್ಲಿಂದ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಹೀಗಾಗಿ, ದೆಹಲಿ ಪೊಲೀಸರು ಪ್ರಧಾನಿ ನಿವಾಸದ ಬಳಿ ಭದ್ರತೆ ಹೆಚ್ಚಿಸಿದ್ದಾರೆ.
#WATCH | Delhi: Delhi police make announcements outside the Patel Chowk Metro station for the AAP protestors. The police said that section 144 had been imposed, there is no permission for protests and that the area should be cleared within 5 minutes.
Security had been heightened… pic.twitter.com/aN7lOqaxn5
— ANI (@ANI) March 26, 2024
“ಸೆಕ್ಷನ್ 144 ಜಾರಿ ಮಾಡಲಾಗಿದೆ. ಪ್ರತಿಭಟನೆ ನಡೆಸಲು ಯಾವುದೇ ಅವಕಾಶವಿಲ್ಲ. ಪ್ರಧಾನಿ ಕಚೇರಿ ಪ್ರದೇಶದಲ್ಲಿ ಸೇರಿರುವವರು ಐದು ನಿಮಿಷಗಳಲ್ಲಿ ಜಾಗವನ್ನು ತೆರವುಗೊಳಿಸಬೇಕು” ಎಂದು ಎಎಪಿ ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಪಟೇಲ್ ಚೌಕ್ ಮೆಟ್ರೋ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಮೂರು ಮೆಟ್ರೋ ನಿಲ್ದಾಣಗಳ ಬಾಗಿಲನ್ನು ಮುಚ್ಚಲಾಗಿದೆ. ಲೋಕ ಕಲ್ಯಾಣ ಮಾರ್ಗ ಮೆಟ್ರೋ ನಿಲ್ದಾಣದಲ್ಲಿ ಭದ್ರತೆಯ ಕಾರಣವನ್ನು ನೀಡಿ ಪೊಲೀಸರು ಹೊರಹೋಗುವ ಗೇಟ್‌ಗಳನ್ನು ಮುಚ್ಚಿದ್ದಾರೆ. ಪಟೇಲ್ ಚೌಕ್ ಮತ್ತು ಸೆಂಟ್ರಲ್ ಸೆಕ್ರೆಟೇರಿಯೇಟ್ ಮೆಟ್ರೋ ನಿಲ್ದಾಣದಲ್ಲಿ ಒಳಹೋಗುವ ಮತ್ತು ಹೊರಬರುವ ಎರಡೂ ಗೇಟ್‌ಗಳನ್ನು ಮುಚ್ಚಲಾಗಿದೆ.
ದೆಹಲಿ ಅಬಕಾರಿ ನಿಯಮ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ರೂಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.