ಸತ್ಯ ಹೇಳಿದರೆ ಬಿಜೆಪಿಯವರಿಗೆ ಮೆಣಸಿನಕಾಯಿ ಇಟ್ಟಂತಾಗುತ್ತದೆ: ಸಚಿವ ಶಿವರಾಜ ತಂಗಡಗಿ ತಿರುಗೇಟು

Date:

Advertisements

“ದಾರಿ ತಪ್ಪಿಸುವವರ ವಿರುದ್ಧ ನಮ್ಮ ಕಡೆ ಹೀಗೆ ಮಾತನಾಡುವುದು ಸಾಮಾನ್ಯ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರ ಕರ್ನಾಟಕ ಭಾಷೆಯಲ್ಲಿ ಮೋದಿ.. ಮೋದಿ.. ಎನ್ನುವ ಯುವಕರ, ವಿದ್ಯಾರ್ಥಿಗಳ ಮುಖಕ್ಕೆ ಹೊಡೆಯಿರಿ ಎಂದು ಹೇಳಿರುವುದಕ್ಕೆ ಮೋದಿಯವರ ಮೋಸವೇ ಕಾರಣ” ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಮಾತನ್ನು ಸಮರ್ಥಿಸಿಕೊಂಡರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿ ಟಿ ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ ಎಂದು ಕೇಳಬಹುದಿತ್ತು. ಆದರೆ ಅವರಷ್ಟು ಕೆಳಮಟ್ಟಕ್ಕೆ ನಾನು ಇಳಿಯಲು ಇಷ್ಟಪಡುವುದಿಲ್ಲ” ಎಂದರು.

“ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ, ತಯಾರಿದ್ದೀರಾ? 2 ಕೋಟಿ ಉದ್ಯೋಗ, ನರೇಗಾ ಅನ್ಯಾಯದ ಬಗ್ಗೆ ಉತ್ತರ ಕೊಡಲು ಸಿದ್ದರಿದ್ದೀರಾ?” ಎಂದು ಸವಾಲು ಹಾಕಿದರು.

Advertisements

“ಬಿಜೆಪಿಯವರು ಸುಳ್ಳು, ಕಪಟ, ಮೋಸ ಮಾಡುವುದರ ಜೊತೆಗೆ ನಮ್ಮ ಯುವಕರ, ಮಕ್ಕಳ ಹಾದಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ನಾನು ಕಾರಟಗಿಯಲ್ಲಿ ಹೇಳಿದ ಹೇಳಿಕೆಗೆ ಬದ್ದನಾಗಿದ್ದೇನೆ. ಮಾಧ್ಯಮದವರು ನನ್ನ ಭಾಷಣದ ಪೂರ್ಣಪಾಠವನ್ನು ಹಾಕಿ, ಕೇವಲ ತುಣುಕನ್ನು ಮಾತ್ರ ಏಕೆ ಹಾಕಿದ್ದೀರಿ” ಎಂದು ಪ್ರಶ್ನಿಸಿದರು.

“ಬಿಜೆಪಿಯವರು 2014ರ ಲೋಕಾಸಭಾ ಚುನಾವಣೆ ವೇಳೆ ಮಾಡಿದ ಭಾಷಣಗಳನ್ನು ಅವರೇ ಕೇಳಲಿ. ಅವರ ಭಾಷಣ ಕೇಳಿ ಅವರೇ ಬಿಜೆಪಿಗೆ ಮತ ನೀಡುವುದಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು, ಎರಡು ಕೋಟಿ ಉದ್ಯೋಗ ನೀಡಲಾಗಿದೆಯೇ? 10 ವರ್ಷದಲ್ಲಿ ಒಂದೇ ಒಂದು ಉದ್ಯೋಗ ನೀಡಿಲ್ಲ. ಸ್ಮಾರ್ಟ್ ಸಿಟಿ ಎಷ್ಟು ಅಭಿವೃದ್ದಿ ಮಾಡಿದ್ದಾರೆ ಉತ್ತರಿಸಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

“ನಮ್ಮ ಪಾಲಿನ ಹಣ ಕೇಳಿದರೆ ಆರೋಪ ಮಾಡುತ್ತಾರೆ. ಬರ ಪರಿಹಾರ ನೀಡುತ್ತಿಲ್ಲ. ಬರ ಅಧ್ಯಯನ ತಂಡಗಳು ಬಂದು ಹೋದರೂ ಹಣ ನೀಡುತ್ತಿಲ್ಲ. ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಬಿಜೆಪಿಯವರು ನೂರಾರು ಬಾರಿ ಕೆಟ್ಟದಾಗಿ ಮಾತನಾಡಿದ್ದಾರೆ” ಎಂದು ಹರಿಹಾಯ್ದರು.

“ಬಿಜೆಪಿ ಪಕ್ಷದ ಅನುರಾಗ್ ಠಾಕೂರ್ ʼಮೋದಿ ವಿರುದ್ದ ಮಾತನಾಡಿದವರಿಗೆ ಗುಂಡಿಕ್ಕಿ ಕೊಲ್ಲಿʼ ಎಂದು ಹೇಳುತ್ತಾರೆ. ಜವಾಬ್ದಾರಿಯುತ ಸಚಿವರ ಮಾತೇ ಅದು. ಅವರನ್ನು ವಜಾ ಮಾಡುವ ಶಕ್ತಿ ನಿಮ್ಮ ಬಳಿ ಇಲ್ಲವೇ? ಪ್ರಜ್ಞಾಸಿಂಗ್ ಠಾಕೂರ್ ಶಿವಮೊಗ್ಗಕ್ಕೆ ಬಂದಾಗ “ನಿಮ್ಮ ಮನೆಯಲ್ಲಿ ಚಾಕೂ ಚೂರಿ, ಬಂದೂಕು ತಯಾರು ಮಾಡಿಟ್ಟುಕೊಳ್ಳಿʼ ಎಂದಿದ್ದರು. ನಿಮ್ಮದು ಸಂಸ್ಕೃತಿಯ ಮಾತೇ?” ಎಂದು ಕುಟುಕಿದರು.

“ನನಗೆ ಬಿಜೆಪಿಯ ಭಾಷೆಯಲ್ಲೂ ಮಾತನಾಡಲು ಬರುತ್ತದೆ. ಕನ್ನಡ ಸಂಸ್ಕೃತಿ ಸಚಿವನಾದ ನನಗೆ ನನ್ನ ತಂದೆ- ತಾಯಿ ಒಳ್ಳೆಯ ಸಂಸ್ಕಾರ ಕಲಿಸಿದ್ದಾರೆ. ಲೂಟಿ ರವಿ ಅವರೇ, ಸಿದ್ದರಾಮಯ್ಯ, ಶಿವಕುಮಾರ್, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಸಂಸ್ಕೃತಿ ಕಲಿಸಿದ್ದಾರೆ” ಎಂದರು.

ಕಾಳಜಿ ಇಟ್ಟುಕೊಂಡು ಮಾತನಾಡಿದ್ದೇನೆ

“ಬಿಜೆಪಿಯವರು ಧರ್ಮದ ಆಧಾರದಲ್ಲಿ ರಾಜಕೀಯ ಮಾಡುತ್ತಾ ಇದ್ದಾರೆ ಎಂದು ಯುವಕರ ಪರವಾದ ಕಾಳಜಿ ಇಟ್ಟುಕೊಂಡು ಮಾತನಾಡಿದ್ದೇನೆ. ತ್ರಿಶೂಲ, ಕತ್ತಿ, ಚಾಕು, ಚೂರಿ ಇಟ್ಟುಕೊಂಡು ಎಷ್ಟೋ ಕಾರ್ಯಕ್ರಮದಲ್ಲಿ ಪ್ರದರ್ಸನ ಮಾಡಿದ್ದೀರಿ. ನಾವು ಸತ್ಯವನ್ನು ಹೇಳಿದರೆ ನಿಮಗೆ ಉರಿ ಬೀಳುತ್ತದೆ. ಮೆಣಸಿಕಾಯಿ ಇಟ್ಟುಕೊಂಡಂತೆ ಆಗುತ್ತದೆ” ಎಂದರು ಕುಟುಕಿದರು.

ದಲಿತರ ಮೇಲೆ ವಾಗ್ದಾಳಿ ನಡೆಸುವುದು ಬಿಜೆಪಿಯ ತಂತ್ರ: ರಮೇಶ್ ಬಾಬು

“ಶಿವರಾಜ ತಂಗಡಗಿ ಅವರು ದಲಿತ ಸಮುದಾಯದ ವ್ಯಕ್ತಿ. ಉದ್ದೇಶಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ನಡೆಸುವುದು ಬಿಜೆಪಿಯ ತಂತ್ರ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಅವಹೇಳನ ಮಾಡಿದ್ದರು. ಇದು ಅವರ ಸಂಸ್ಕೃತಿ” ಎಂದು ರಮೇಶ್‌ ಬಾಬು ಟೀಕಿಸಿದರು.

“ಚುನಾವಣೆ ವೇಳೆಯಲ್ಲಿ ಬಿಜೆಪಿಯವರು ಸಂಸ್ಕೃತಿಯನ್ನು ತೋರಿಸಿದ್ದಾರೆ. ಅಸಂವಿಧಾನಿಕ ಪದ ಬಳಸಿರುವ ಸಿ.ಟಿ.ರವಿ ಅವರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದೇವೆ. ಸಿ.ಟಿ.ರವಿ ಅವರು ಬಳಸಿರುವ ಪದ ಸಂಘ- ಪರಿವಾರದಿಂದ ಬಂದಿರುವ ಬಳುವಳಿ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

Download Eedina App Android / iOS

X