ಬೀದರ್ ಜಿಲ್ಲೆಯ ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಧಿಕಾರಿ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೀದರ್ ನಗರದ ಕೃಷಿ ಕಾಲನಿಯ ಮನೆ, ಕಲಬುರಗಿ ನಗರದ ಮನೆ, ಬೀದರ್ ತಾಲೂಕಿನ ನಾಗೂರ್ ಗ್ರಾಮದ ಮನೆ ಹಾಗೂ ಭಾಲ್ಕಿ ಪಟ್ಟಣದ ಕಾರಂಜಾ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೇಕಾರ್ ನೇತ್ರತ್ವದಲ್ಲಿ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರದಲ್ಲಿ ಆರ್‌ಟಿಓ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ :
ವಿಜಯಪುರದ ಚಾಲುಕ್ಯ ನಗರದಲ್ಲಿ ಆರ್‌ಟಿಒ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಎಂಬುವರ ಮನೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಡಿಎಸ್ಪಿ ಸುರೇಶ ರೆಡ್ಡಿ, ಇನ್ಸಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ ನೇತ್ರತ್ವದಲ್ಲಿ ದಾಳಿ ನಡೆದಿದೆ.