ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರು, ಶಿವಮೊಗ್ಗದಲ್ಲಿ ಎನ್​​ಐಎ ದಾಳಿ

Date:

Advertisements

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಒಟ್ಟು ಐದು ಕಡೆ ಶಂಕಿತ ವ್ಯಕ್ತಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಎನ್​ಐಎ ತಂಡ ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ. ಬಳಿಕ ಶಿವಮೊಗ್ಗಕ್ಕೆ ತೆರಳಿದ್ದು, ಶಂಕಿತರ ಮನೆಗಳ ಮೇಲೆ ಕಾರ್ಯಾಚರಣೆ ಕೈಗೊಂಡಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ಹಾಗೂ ಮುಂಬೈನಿಂದ 5 ವಾಹನಗಳಲ್ಲಿ ಸುಮಾರು 15 ಅಧಿಕಾರಿಗಳ ತಂಡ ತೀರ್ಥಹಳ್ಳಿಗೆ ಆಗಮಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ.

Advertisements

ಚೆನ್ನೈನ ಮೂರು ಕಡೆ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು| ಮಹಿಳೆಯ ಮೇಲೆ ಹಲ್ಲೆ ಎಸಗಿದ ಪ್ರಕರಣ; ಬಿಎಂಟಿಸಿ ಕಂಡಕ್ಟರ್ ಅಮಾನತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.23ರ ಸಂಜೆ ಬೆಂಗಳೂರಿನ ಇಬ್ಬರು ಶಂಕಿತರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ವೈಟ್​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಹತ್ತುಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಆರಂಭದಲ್ಲಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿ ಪೊಲೀಸರು ವಹಿಸಿಕೊಂಡಿದ್ದರು. ನಂತರ, ಈ ಪ್ರಕರಣದ ತನಿಖೆಯನ್ನು ಸರ್ಕಾರ ಎನ್​ಐಎಗೆ ವರ್ಗಾವಣೆ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ...

ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ...

ಗುಬ್ಬಿ | ಧಾರ್ಮಿಕ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ಕೊಡಿಯಾಲದ ವೀರೇಶಾರಾಧ್ಯ

ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ...

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

Download Eedina App Android / iOS

X