ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

Date:

Advertisements

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಮತ್ತೊಂದು ನೋಟಿಸ್ ನೀಡಿದೆ. ಈಗಾಗಲೇ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗಿದ್ದು, ಸುಮಾರು 135 ಕೋಟಿ ರೂಪಾಯಿಯನ್ನು ಐಟಿ ಇಲಾಖೆಯು ಕಾಂಗ್ರೆಸ್‌ ಖಾತೆಯಿಂದ ವಿತ್‌ಡ್ರಾ ಮಾಡಿಕೊಂಡಿದೆ. ಈಗ ಲೆಕ್ಕಪತ್ರವಿಲ್ಲದ 524 ಕೋಟಿ ರೂಪಾಯಿ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಮತ್ತೊಂದು ನೋಟಿಸ್ ನೀಡಿದೆ. ಅದು ಕೂಡಾ 2014-2021 ಸಾಲಿನ ಲೆಕ್ಕಾಚಾರ ಇದಾಗಿದೆ.

2019ರ ಲೋಕಸಭೆ ಚುನಾವಣೆಗೂ ಮುನ್ನ ಐಟಿ ದಾಳಿಗಳನ್ನು ಮಾಡಲಾಗಿದ್ದು, ಈಗ 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ಗೆ ಮತ್ತೆ ಭಾರೀ ದಂಡ ವಿಧಿಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ನಡುವೆ ವಿಪಕ್ಷಗಳು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ವಿಪಕ್ಷಗಳನ್ನು ಆರ್ಥಿಕವಾಗಿ ದಿವಾಳಿ ಮಾಡಲೆಂದೇ 1994-95ರ ಐಟಿ ರಿಟರ್ನ್ ಸಲ್ಲಿಕೆಯ ಲೆಕ್ಕಾಚಾರ ಹಾಕಲಾಗುತ್ತಿದೆ” ಎಂದು ಆರೋಪಿಸಿದೆ.

ಇದನ್ನು ಓದಿದ್ದೀರಾ?  ₹210 ಕೋಟಿ ದಂಡ ವಿಧಿಸಿ ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಳ್ಳಲಾಗಿದೆ: ರಾಹುಲ್ ಗಾಂಧಿ

Advertisements

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಸುಪ್ರೀಂ ಕೋರ್ಟ್ ವಕೀಲ, ಕಾಂಗ್ರೆಸ್ ಮುಖಂಡ ವಿವೇಕ್ ಕೃಷ್ಣ ತನ್ಕಾ “ಈಗ ಆದಾಯ ತೆರಿಗೆಯು 523.87 ಕೋಟಿ ರೂಪಾಯಿ ವಹಿವಾಟಿನ ಮೇಲೆ ಭಾರೀ ಪ್ರಮಾಣದ ದಂಡ ಮತ್ತು ಬಡ್ಡಿ ವಿಧಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

“ಲೋಕಸಭೆ ಚುನಾವಣೆಗೂ ಮುನ್ನ ನಮ್ಮ ಖಾತೆಯಿಂದ 135 ಕೋಟಿ ರೂಪಾಯಿ ವಿತ್‌ಡ್ರಾ ಮಾಡಿ ನಮ್ಮ ಆರ್ಥಿಕ ಶಕ್ತಿ ಕುಂದಿಸಿದ್ದು ಸಾಕಾಗಿಲ್ಲ ಅನಿಸುತ್ತದೆ. ಈಗ ನಮ್ಮ ಆರ್ಥಿಕ ಶಕ್ತಿಯನ್ನು ಇನ್ನಷ್ಟು ಕುಗ್ಗಿಸಲು ನೋಡುತ್ತಿದೆ. ಆದರೆ ಇನ್ನೇನು ಬಾಕಿ ಉಳಿದಿದೆ” ಎಂದು ವಿವೇಕ್ ಕೃಷ್ಣ ತನ್ಕಾ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಜಾ

ಇತ್ತೀಚೆಗೆ ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. 2014-15, 2015-16 ಮತ್ತು 2016-17 ಹಣಕಾಸು ವರ್ಷದ ಆದಾಯ ತೆರಿಗೆಯನ್ನು ಮರು ಮೌಲ್ಯಮಾಪನ ಮಾಡುವ ಆದೇಶವನ್ನು ಕಾಂಗ್ರೆಸ್‌ ಪ್ರಶ್ನಿಸಿತ್ತು.

ನಿಯಮವನ್ನು ಉಲ್ಲಂಘಿಸಿ ಹೆಚ್ಚುವರಿ ವರ್ಷಗಳ ಆದಾಯ ತೆರಿಗೆ ಮರು ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಪರ ವಕೀಲ ಹಿರಿಯ ವಕೀಲ ಅಭಿಷೇಕ್ ಸಿಂಗ್ವಿ ಆದಾಯ ತೆರಿಗೆ ಇಲಾಖೆಯು ಆರು ವರ್ಷಕ್ಕಿಂತ ಹಳೆಯ ಆದಾಯ ತೆರಿಗೆಗಳ ಮರು ಮೌಲ್ಯಮಾಪನ ಮಾಡುತ್ತಿದೆ ಎಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X