ರಾಯಚೂರು | ಬಿಜೆಪಿ ಮಣಿಸಬೇಕೆನ್ನುವ ಕಾಂಗ್ರೆಸ್‌ಗೆ ಟಿಕೆಟ್‌ ಸಂಕಷ್ಟ

Date:

Advertisements
ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತದಾದ ದಿನಾಂಕ ಸಮೀಪಿಸುತ್ತಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಒಂದೇ ದಿನ (ಏ.20) ಬಾಕಿ ಉಳಿದಿದೆ. ಆದರೂ, ರಾಯಚೂರು ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಾಂಗ್ರೆಸ್‌ ಇನ್ನೂ ಘೋಷಿಸಿಲ್ಲ. ಕೊನೆ ಕ್ಷಣದಲ್ಲಿ ಯಾರಿಗೆ ಕಾಂಗ್ರೆಸ್‌ ಟಿಕೆಟ್‌ ಯಾರಿಗೆ ವೊಲಿಯಲಿದೆ ಎಂಬುದು ಕ್ಷೇತ್ರದ ಮತದಾರರು ಮಾತ್ರವಲ್ಲ, ಅಖಾಡದಲ್ಲಿರುವ ಇತರ ಪಕ್ಷಗಳ ಅಭ್ಯರ್ಥಿಗಳಲ್ಲಿಯೂ ಕೌತುಕ ಉಂಟುಮಾಡಿದೆ.

ರಾಯಚೂರು ನಗರ ಕ್ಷೇತ್ರವು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಎರಡು ಅವಧಿಗಳಿಂದ ಕ್ಷೇತ್ರವು ಬಿಜೆಪಿ ತೆಕ್ಕೆಯಲ್ಲಿದೆ. ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾಗಿರುವ ಬಿಜೆಪಿ ಶಾಸಕ ಡಾ. ಶಿವರಾಜ್‌ ಪಾಟೀಲ್‌ ಹ್ಯಾಟ್ರಿಕ್‌ ಗೆಲುವು ಸಾಧಿಸಲು ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿ, ಅವರನ್ನು ಮಣಿಸಲೇಬೇಕು, ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಯತ್ನಿಸುತ್ತಿದೆ. ಆದರೆ, ತನ್ನ ಅಭ್ಯರ್ಥಿಯಾರೆಂದು ಘೋಷಿಸುವುದೇ ಕೈ ಪಾಳಯಕ್ಕೆ ಕಗ್ಗಂಟಾಗಿದೆ.

ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ. ಆದರೂ, ಇದೂವರೆಗೂ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರಿಗೆ ಟಿಕೆಟ್‌ ನೀಡುತ್ತಾ ಬಂದಿರುವ ಕಾಂಗ್ರೆಸ್‌ಗೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂಬುದು ಬಿಸಿ ತುಪ್ಪವಾಗಿ ಪರಿಣಮಿಸಿದೆ.

Advertisements

ರಾಯಚೂರು ನಗರ ಮಾತ್ರವಲ್ಲದೆ, ಮಾನ್ವಿ ಮತ್ತು ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿಯೂ ತನ್ನ ವರ್ಚಸ್ಸನ್ನು ಹೊಂದಿರುವ ಎನ್‌.ಎಸ್‌ ಬೋಸರಾಜು ತಮಗೆ ಟಿಕೆಟ್‌ ನೀಡಬೇಕೆಂದು ಕೇಳುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ದೆಹಲಿಯಲ್ಲಿ ರಾಹುಲ್‌ಗಾಂಧಿ ಅವರನ್ನೂ ಭೇಟಿ ಮಾಡಿ ಬಂದಿದ್ದಾರೆ. ಇತ್ತ, ಸೈಯ್ಯದ್‌ ಯಾಸಿನ್‌ ಅಲ್ಲದಿದ್ದರೆ, ಬೇರೆಯಾದರಾದು ಮುಸ್ಲಿಂ ಮುಖಂಡರಿಗೆ ಟಿಕೆಟ್‌ ನೀಡಬೇಕೆಂಬ ಕೂಗು ಗಟ್ಟಿಯಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಮರಿಗೆ ಟಿಕೆಟ್‌ ನೀಡಿದರೆ ಕಾಂಗ್ರೆಸ್‌ಅನ್ನು ಬೆಂಬಲಿಸುತ್ತೇವೆ. ಇಲ್ಲವಾದರೆ, ನಮ್ಮ ನಿರ್ಧಾರವನ್ನು ಬದಲಿಸುತ್ತೇವೆಂದು ಮುಸ್ಲಿಂ ಮುಖಂಡರು ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ದೇವದುರ್ಗಕ್ಕೆ ದಳಪತಿ ಯಾರು?

ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿದ್ದ ಸೈಯ್ಯದ್ ಯಾಸಿನ್‌, ಕಳೆದ ಎರಡು ಚುನಾವಣೆಗಳಲ್ಲಿ ಶಿವರಾಜ್‌ ಪಾಟೀಲ್ ವಿರುದ್ಧ ಸೋಲುಂಡಿದ್ದಾರೆ. ಈ ಬಾರಿಯೂ ಅವರಿಗೆ ಟಿಕೆಟ್‌ ನೀಡದರೆ ಮತ್ತೆ ಸೋಲಾಗಬಹುದು ಎಂಬ ಅಭಿಪ್ರಾಯಗಳೂ ಕ್ಷೇತ್ರದಲ್ಲಿವೆ. ಸೈಯ್ಯದ್ ಯಾಸೀನ್‌ ಅಲ್ಲದೆ, ಬೇರೆಯಾರಿಗಾದರೂ ಟಿಕೆಟ್‌ ನೀಡಬೇಕು. ಅದರಲ್ಲೂ, ಬೋಸರಾಜು ಅವರಿಗೆ ಟಿಕೆಟ್‌ ನೀಡಿದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಸ್ಚಿತವೆಂದೂ ಹೇಳಲಾಗುತ್ತಿದೆ. ಆದರೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಸಮುದಾಯದ ಮತಗಳು ಕಾಂಗ್ರೆಸ್‌ ಸಿಗುವುದಿಲ್ಲವೆಂಬ ಆತಂಕವೂ ಕಾಂಗ್ರಸ್‌ನಲ್ಲಿ ಆವರಿಸಿದೆ.

ಇದೆಲ್ಲದರ ನಡುವೆ, ಈ ಹಿಂದೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡುತ್ತೇವೆಂದಿದ್ದ ಜೆಡಿಎಸ್‌ ಕೂಡ ತನ್ನ ಅಭ್ಯರ್ಥಿಯನ್ನು ಘೋಷಿಸದೆ, ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ತಮಗೆ ಟಿಕೆಟ್‌ ದೊರೆಯುತ್ತದೆಂಬ ಭರವಸೆಯಲ್ಲಿರುವ ವಿನಯ್‌ ಕುಮಾರ್‌ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಯಾರಿಗೆ ಟಿಕೆಟ್‌ ನೀಡುತ್ತದೆ ಎಂಬುದರ ಆಧಾರದ ಮೇಲೆ ಜೆಡಿಎಸ್‌ ಟಿಕೆಟ್‌ ಘೋಷಣೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X