ಲೋಕಸಭೆ ಚುನಾವಣೆ ಹಿನ್ನೆಲೆ, ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಪೊಲೀಸರು ರೌಡಿಶೀಟರ್‌ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ತನಿಖೆ ಮುಂದುವರಿದಿದೆ.
ಮಾರ್ಚ್ 26ರ ತಡರಾತ್ರಿ 50 ಪೊಲೀಸರ ತಂಡ ಏಕಕಾಲಕ್ಕೆ ಬೆಂಗಳೂರಿನ 290 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ನಗರದ ರಾಜಗೋಪಾಲನಗರ, ಆರ್ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ನಾನಾ ನಗರಗಳಲ್ಲಿ ವಾಸವಾಗಿರುವ ರೌಡಿಶೀಟರ್ ಮನೆಗಳಲ್ಲಿ ಶೋಧ ನಡೆಸಿ, ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಮಾ. 21 ರಂದು ಮುಂಜಾನೆ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರು, ಶಿವಮೊಗ್ಗದಲ್ಲಿ ಎನ್ಐಎ ದಾಳಿ
ಬರೋಬ್ಬರಿ 234 ಮನೆಗಳಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ, 177 ರೌಡಿಗಳು ಮನೆಯಲ್ಲಿರಲಿಲ್ಲ. ಅಲ್ಲದೇ, ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳ ಮೇಲೂ ತಪಾಸಣೆ ನಡೆಸಿದ್ದರು. ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ನಾನಾ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು.
ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದರು.