ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

Date:

ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ನಡೆಯುವ ಪರೀಕ್ಷೆಗಳು ಪ್ರಾದೇಶಿಕ ಭಾಷೆಗಳಲ್ಲೇ ಇರಲಿ ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲ ಕೇಂದ್ರಿಯ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ ಯುಜಿಸಿ, “ಬೋಧನೆ, ಕಲಿಯುವಿಕೆ ಆಂಗ್ಲ ಭಾಷೆಯಲ್ಲಿದ್ದರೂ ಸಹ ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆ ಬರೆಸುವುದು ಉತ್ತಮ. ಸ್ಥಳೀಯ ಮತ್ತು ಪ್ರಾದೇಶಿಕ ಭಾಷೆಗಳ ಬಳಕೆ ಮಾಡುವುದಕ್ಕೆ ಉತ್ತೇಜಿಸುವ ಉದ್ದೇಶ ಈ ಯೋಜನೆಯದ್ದಾಗಿದೆ” ಎಂದು ಹೇಳಿದೆ.

“ಪಠ್ಯಪುಸ್ತಕ ಕೈಪಿಡಿಗಳ ರಚನೆ ಇಂಗ್ಲಿಷ್‌ಗೆ ಮಾತ್ರ ಸೀಮಿತವಾಗದೆ, ಪ್ರಾದೇಶಿಕ ಭಾಷೆಗಳಲ್ಲು ತರ್ಜುಮೆಗೊಳಿಸುವಂತೆ ಬೇಡಿಕೆ ಇದೆ. ಇದರಿಂದಾಗಿ ಕಲಿಯುವ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳ ಗುಂಪು ಕ್ರಮೇಣವಾಗಿ ಏರಿಕೆಯಾಗುತ್ತದೆ. ಇತ್ತೀಚೆಗೆ ಐಐಟಿಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಕೆಯನ್ನು ಅರ್ಧಕ್ಕೆ ಬಿಟ್ಟಿದ್ದಾರೆ. ಇನ್ನೂ ಕೆಲವರು ವರ್ಗಾವಣೆಗೊಂಡಿದ್ದಾರೆ. ಇಂತಹ ಸನ್ನಿವೇಶಗಳನ್ನು ತಡೆಯಲು ಇದೊಂದು ಸರಿಯಾದ ಮಾರ್ಗವಾಗಿದೆ” ಎಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಾದೇಶಿಕ ಭಾಷೆಗಳಲ್ಲಿ ಪುಸ್ತಕ ಪ್ರಕಟಣೆ, ಪರೀಕ್ಷೆ ಬರೆಯುವುದರಿಂದ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತದೆ. 2035ರ ವೇಳೆಗೆ ಉನ್ನತ ಶಿಕ್ಷಣದಲ್ಲಿ ದಾಖಲಾತಿ ದರ (ಜಿಇಆರ್) ಶೇಕಡಾ 27 ರಿಂದ 50ಕ್ಕೆ ಹೆಚ್ಚಿಸಬಹುದು” ಎಂದು ಯುಜಿಸಿ ಮುಖ್ಯಸ್ಥ ಜಗದೀಶ್‌ ಕುಮಾರ್ ಎಂ ತಿಳಿಸಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿ ಮೂಲ ಬರವಣಿಗೆಯ ಅನುವಾದವನ್ನು ಉತ್ತೇಜಿಸಬೇಕು ಮತ್ತು ಬೋಧನೆ-ಕಲಿಕೆಯಲ್ಲಿ ಸ್ಥಳೀಯ ಭಾಷೆಯನ್ನು ಬಳಸಬೇಕೆಂದು ವಿವಿಗಳಿಗೆ ಯುಜಿಸಿ ಹೇಳಿದೆ. 

ಈ ಸುದ್ದಿ ಓದಿದ್ದೀರಾ?: ಮೇ.25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...