ಬೆಂಗಳೂರು | ಮದುವೆಯಾಗುವುದಾಗಿ ನಂಬಿಸಿ ವಿಶೇಷ ಚೇತನ ಯುವತಿಗೆ ವಂಚನೆ

Date:

Advertisements

ವಿಶೇಷ ಚೇತನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುರೇಂದ್ರ ಮೂರ್ತಿ ಎಂಬಾತನ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಸುರೇಂದ್ರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಹೊಂದಿದ್ದು, ಮದುವೆಯಾಗದೆ ವಂಚಿಸಿದ್ದಾನೆ. ಅಲ್ಲದೆ, ತನ್ನಿಂದ ಹಣವನ್ನೂ ಪಡೆದಿದ್ದಾನೆ ಎಂದು ದೂರಿನಲ್ಲಿ ಯುವತಿ ಆರೋಪಿಸಿದ್ದಾರೆ.

ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿತ್ತು. ಆ ನಂತರ ಈ ಪರಿಚಯ ಪ್ರೀತಿಗೆ ತಿರುಗಿತ್ತು. ಸುರೇಂದ್ರ ಮೂರ್ತಿ ಬ್ಯುಸಿನೆಸ್ ಮಾಡಬೇಕಿದೆ. ಅದಕ್ಕೆ ಹಣ ಬೇಕೆಂದು ಯುವತಿ ಹತ್ತಿರ ಕೇಳಿದ್ದಾನೆ. ಆತನಿಗಾಗಿ ಯುವತಿ ಸಾಲ ಮಾಡಿ, ತನ್ನ ಹತ್ತಿರವಿದ್ದ ಚಿನ್ನವನ್ನೂ ಅಡವಿಟ್ಟು ಹಣ ನೀಡಿದ್ದಾರೆ. ಆದರೆ, ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚಿಸಿದ್ದಾನೆ. ಅಲ್ಲದೆ, ಪ್ರೀತಿಯಲ್ಲಿದ್ದ ವೇಳೆ ದೈಹಿಕ ಸಂಬಂಧವನ್ನೂ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ. 

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

ಘಟನೆ ಸಂಬಂಧ, ವಿಶೇಷ ಚೇತನ ಯುವತಿ  ಫೆಬ್ರವರಿ ತಿಂಗಳಲ್ಲಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಕೃತ್ಯವು ಕೊಡಗೆಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಕೊಡಿಗೆಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X