ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

Date:

Advertisements

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಂಡ ವಿಧಿಸಲು ಮುಂದಾಗಿದೆ. ಸದ್ಯ ಪಾಲಿಕೆಯ ಈ ನಡೆಯ ವಿರುದ್ಧ ಪಕ್ಷಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಧಾನಿಯಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಳವಾಗಿದೆ. ಅದರಲ್ಲಿಯೂ ನಗರದ ರೇಸ್ ಕೋರ್ಸ್ ರೋಡ್, ಕಬ್ಬನ್ ಪಾರ್ಕ್, ಸ್ಯಾಂಕಿ ಟ್ಯಾಂಕ್ ರಸ್ತೆಗಳಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ, ಪಾರಿವಾಳಗಳು ಎಲ್ಲಿಲ್ಲಿ ಹೆಚ್ಚಾಗಿ ಕಂಡುಬರುತ್ತವೋ, ಆ ಸ್ಥಳಗಳಲ್ಲಿ ಪಾರಿವಾಳಗಳಿಗೆ ಊಟ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಇನ್ನುಮುಂದೆ ಪಾರಿವಾಳಗಳಿಗೆ ಊಟ ಹಾಕಿದರೆ, ₹200 ದಂಡ ಹಾಕಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದುವೆಯಾಗುವುದಾಗಿ ನಂಬಿಸಿ ವಿಶೇಷ ಚೇತನ ಯುವತಿಗೆ ವಂಚನೆ

Advertisements

ದಿನದಿಂದದಿನಕ್ಕೆ ನಗರದಲ್ಲಿ ಪಾರಿವಾಳಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಬೇಸಿಗೆಯ ಸಮಯದಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಳವಾದರೇ, ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಾಡುತ್ತವೆ. ಅಲ್ಲದೇ, ಪಾರಿವಾಳಗಳ ರೆಕ್ಕೆಗಳಿಂದಅಸ್ತಮಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ರೀತಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X