ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

Date:

Advertisements

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಎಲ್ಲಿಯೂ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಚೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಸಿಂಟೆಕ್ಸ್ ಟ್ಯಾಂಕ್ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ಪೂರೈಕೆ ಮಾಡಬೇಕು” ಎಂದು ಹೇಳಿದರು.

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ 46 ಶುದ್ಧ ಕುಡಿಯುವ ನೀರಿನ ಘಕಟಗಳು ಬರಲಿದ್ದು, 42 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 4 ಘಟಕಗಳು ಸ್ಥಗಿತಗೊಂಡಿದ್ದು, ಸದ್ಯ ಇರುವ ಘಟಕಗಳಿಗೆ ಕೂಡಲೇ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಪೂರೈಕೆ ಮಾಡಬೇಕು” ಎಂದರು.

Advertisements

“ಜಲಮಂಡಳಿಯ ಜಲಗಾರಗಳಲ್ಲಿ ಏಕ ಕಾಲದಲ್ಲಿ ಮೂರು/ನಾಲ್ಕು ಟ್ಯಾಂಕರ್ ಗಳಿಗೆ ನೀರು ಪೂರೈಕೆ ಮಾಡುವ ಹಾಗೇ ಪೈಪ್ ಅಳವಡಿಸಿಕೊಂಡು ನೀರಿನ ಸಮಸ್ಯೆಯಿರುವ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಎಷ್ಟು ಕೊಳವೆ ಬಾವಿಗಳು ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ, ಎಷ್ಟು ಬತ್ತಿ ಹೋಗಿವೆ. ಎಷ್ಟು ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆಯಿದೆ. ಯಂತ್ರಗಳು ಹಾಳಾಗಿವೆ, ಎಲ್ಲೆಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಬೇಕಿದೆ ಎಂಬುದನ್ನು ಸರಿಯಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ನೋಂದಣಿಯಾದ ಟ್ಯಾಂಕರ್‌ಗಳು ಸ್ಟಿಕ್ಕರ್ ಅಂಟಿಸಬೇಕು

“ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕರ್‌ಗಳನ್ನು ಅಂಟಿಸಿಕೊಳ್ಳಬೇಕಿದೆ” ಎಂದು ತಿಳಿಸಿದರು.

ಪ್ರತಿ ಟ್ಯಾಂಕರ್ ಮಾಲೀಕರು ಸ್ವಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕರ್‌ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಸ್ಟಿಕ್ಕರ್ ಅಂಟಿಸದಿರುವ ಟ್ಯಾಂಕರ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

ವೇಳೆ ವಲಯ ಆಯುಕ್ತರಾದ ರಮೇಶ್, ವಿಪತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾದ ಸುರೋಳ್ಕರ್ ವಿಕೋಸ್ ಕಿಶೋರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X