ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ

Date:

Advertisements

ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.

ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು,  ರಾಜೀನಾಮೆಯನ್ನು ಹೊರಟ್ಟಿ ಅಂಗೀಕರಿಸಿದ್ದಾರೆ. ಜೂನ್‌ನಲ್ಲಿ ಪರಿಷತ್‌ ಸದಸ್ಯ ಸ್ಥಾನದ ಅವಧಿ ಮುಗಿಯಲಿದ್ದು, ಮೂರು ತಿಂಗಳು ಮುಂಚೆಯೇ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು – ಕೊಡಗು ಟಿಕೆಟ್‌ ಕೈತಪ್ಪಿದ ಬೆನ್ನಲ್ಲಿಯೇ ಮುನಿಸಿಕೊಂಡು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Advertisements

ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದ ತೇಜಸ್ವಿನಿ ಅವರು ಆ ಬಳಿಕ ರಾಜಕೀಯ ಪ್ರವೇಶ ಮಾಡಿ ಜನಪ್ರತಿನಿಧಿಯಾಗಿದ್ದರು. ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರಿಗೆ ಸೋಲುಣಿಸಿದ್ದ ತೇಜಸ್ವಿನಿ ಗೌಡ ಮತ್ತೆ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X