ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

Date:

Advertisements

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ‘ರಂಗ ಭೂಪತಿ’ ಮೊದಲ ಪ್ರಶಸ್ತಿಯನ್ನು ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ಘೋಷಿಸಲಾಗಿದೆ. ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಅವರು ಪ್ರದಾನ ಮಾಡಲಿದ್ದಾರೆ.

ಮಾರ್ಚ್ 30ರಂದು ಸಂಜೆ 6:30ಕ್ಕೆ ಧಾರವಾಡದ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಧಾರವಾಡದ ಗೋ.ವಾ. ರಂಗ-ಸಂಗ, ಆಟ-ಮಾಟ, ಹಾಗೂ ಬೆಂಗಳೂರಿನ ಬಹುರೂಪಿ ಫೌಂಡೇಶನ್ ಸಂಸ್ಥೆಗಳು ಈ ಪ್ರಶಸ್ತಿಯನ್ನು ಸ್ಥಾಪಿಸಿವೆ.

ರಂಗಕರ್ಮಿ ಧನಂಜಯ ಕುಲಕರ್ಣಿ ಹಾಗೂ ಹಿರಿಯ ಪತ್ರಕರ್ತ, ಬಹುರೂಪಿ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥರಾದ ಜಿ ಎನ್ ಮೋಹನ್, ರವಿ ಕುಲಕರ್ಣಿ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿರುತ್ತಾರೆ.

Advertisements

“ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದ್ದು, ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಂ, ರವಿ ಯಲ್ಲಪ್ಪನವರ್, ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ” ಎಂದು ಕಾರ್ಯಕ್ರಮದ ಆಯೋಜಕರೂ, ಗೋ.ವಾ. ರಂಗ-ಸಂಗದ ರಾಜಕುಮಾರ ಮಡಿವಾಳರ ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದ ಶ್ರೀಪಾದ ಭಟ್ ಅವರು ಕನ್ನಡ ರಂಗಭೂಮಿಯ ಮಹತ್ವದ ಹೆಸರು. ರಂಗಭೂಮಿಯ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಎರಡೂ ರಂಗಗಗಳಲ್ಲಿ ನುರಿತವರು.

ಸಾಹಿತ್ಯ, ಶಿಕ್ಷಣ, ರಂಗಭೂಮಿ, ಜಾನಪದ ಅಧ್ಯಯನ, ಸಂಗೀತ, ಸಂಘಟನೆ ಇವರ ಆಸಕ್ತಿಯ ಕ್ಷೇತ್ರಗಳು. ಶಿಕ್ಷಣ, ಕಾವ್ಯ ಹಾಗೂ ಮಕ್ಕಳ ರಂಗಭೂಮಿಯಲ್ಲಿ ಇವರು ನಡೆಸಿದ ಪ್ರಯೋಗಗಳು ದೇಶಾದ್ಯಂತ ಹೆಸರುವಾಸಿಯಾಗಿದೆ.  ಗಾಂಧಿ- 150ರ ಸಂದರ್ಭದಲ್ಲಿ ಇವರು ನಿರ್ದೇಶಿಸಿದ ‘ಪಾಪು-ಬಾಪು’ ನಾಟಕವು 2 ಸಾವಿರ ಪ್ರಯೋಗ ಕಂಡಿದೆ. ಇದುವರೆಗೂ ಸುಮಾರು 150 ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

‘ದಡವ ನೆಕ್ಕಿದ ಹೊಳೆ’ ನಟನೆಯ ಕೈಪಿಡಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ರಂಗಭೂಮಿ ಕುರಿತ ಅಧ್ಯಯನಕ್ಕೆ ಪಿಎಚ್‌ಡಿ ಪಡೆದಿದ್ದಾರೆ.

ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X